ಭುವನೇಶ್ವರ: ಇಲ್ಲಿನ ಕಳಿಂಗಾ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರೀಯಲ್ ಟೆಕ್ನಾಲಜಿ (ಕೆಐಐಟಿ) ಕ್ಯಾಂಪಸ್ನಲ್ಲಿ ನಡೆದ ‘ಫೆಮಿನಾ ಮಿಸ್ ಇಂಡಿಯಾ 2026’ರ ಗ್ರ್ಯಾಂಡ್ ಫಿನಾಲೆಯಲ್ಲಿ ಗೋವಾದ ಸಾಧ್ವಿ ಸತೀಶ್ ಸೈಲ್ ಅವರು ವಿಜೇತರಾದರು.

ಮಹಾರಾಷ್ಟ್ರದ ರಾಜನಂದಿನಿ ಪವಾರ್ ಎರಡನೇ ಸ್ಥಾನ ಹಾಗೂ ಜಮ್ಮು ಮತ್ತು ಕಾಶ್ಮೀರದ ಶ್ರೀ ಅದ್ವೈತ ಜಿ ಅವರು ಮೂರನೇ ಸ್ಥಾನ ಪಡೆದುಕೊಂಡರು.

ಈ ಹಿಂದಿನ ವಿಜೇತರಾದ ನಿಖಿತಾ ಪೋರ್ವಾಲ್, ರೇಖಾ ಪಾಂಡೆ ಹಾಗೂ ಆಯುಷಿ ಧೋಕಲಾ ಅವರು ನೂತನ ವಿಜೇತೆಗೆ ಕಿರೀಟ ಧಾರಣೆ ಮಾಡಿ ಶುಭ ಹಾರೈಸಿದರು.

ಪೂರ್ವ ಭಾರತದ ವಿಶ್ವವಿದ್ಯಾಲಯವೊಂದರಲ್ಲಿ ಇಂತಹ ಸ್ಪರ್ಧೆ ನಡೆದಿರುವುದು ಇದೇ ಮೊದಲು. 61ನೇ ಆವೃತ್ತಿಯ ಸ್ಪರ್ಧೆಯಲ್ಲಿ ದೇಶದ 30 ರಾಜ್ಯಗಳ ಸ್ಪರ್ಧಿಗಳು ಭಾಗವಹಿಸಿದ್ದರು. ಎರಡನೇ ಹಂತಕ್ಕೆ ಆಯ್ಕೆಯಾದ 15 ಸ್ಪರ್ಧಿಗಳಲ್ಲಿ ಕರ್ನಾಟಕದ ಖುಷಿ ರಮೇಶ್ ಕಲಕೇರಿ ಅವರೂ ಸೇರಿದ್ದರು. ಅಂತಿಮವಾಗಿ ಮೂವರನ್ನು ಆಯ್ಕೆ ಮಾಡಲಾಯಿತು.

ಸಾಧ್ವಿ ಅವರು ಮುಂದೆ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಸ್ಪರ್ಧಾ ವಿಜೇತರನ್ನು ಅಭಿನಂದಿಸಿ ಮಾತನಾಡಿದ ಕೆಐಐಟಿ ಮತ್ತು ಕೆಐಎಸ್ಎಸ್ನ ಸಂಸ್ಥಾಪಕ ಹಾಗೂ ಮಾಜಿ ಸಂಸದರಾದ ಅಚ್ಯುತ ಸಮಂತಾ ಅವರು, ‘ಇದೊಂದು ಐತಿಹಾಸಿಕ ದಿನ. ಇಂತಹ ಸ್ಪರ್ಧೆಯನ್ನು ನಮ್ಮ ಸಂಸ್ಥೆಯಲ್ಲಿ ಆಯೋಜಿಸಿದ್ದು ಹೆಮ್ಮೆಯ ವಿಷಯ. ಇದರ ಯಶಸ್ಸಿಗೆ ಹಗಲಿರುಳು ಶ್ರಮಿಸಿದ ಎಲ್ಲರಿಗೂ ತುಂಬು ಹೃದಯದ ಧನ್ಯವಾದಗಳು’ ಎಂದರು.

‘ಈ ಅವಕಾಶ ಸಿಕ್ಕಿದ್ದಕ್ಕೆ ತುಂಬಾ ಕೃತಜ್ಞಳಾಗಿದ್ದೇನೆ. ಎಲ್ಲಾ ಸ್ಪರ್ಧಿಗಳೊಂದಿಗೆ ಕಳೆದ ಸುಂದರ ಸಮಯವನ್ನು ಸದಾ ಸ್ಮರಿಸುತ್ತೇನೆ. ನನ್ನ ಎಲ್ಲಾ ಸ್ನೇಹಿತರೂ ವಿಜೇತರು. ನಾವು ಭಾರತವು ಪ್ರಪಂಚದಾದ್ಯಂತ ಹೆಮ್ಮೆಪಡುವಂತೆ ಮಾಡಲು ಬಯಸುತ್ತೇವೆ’ ಎಂದು ವಿಜೇತೆ ಸಾಧ್ವಿ ಸೈಲ್ ಹೇಳಿದರು.

ನಗದು ಬಹುಮಾನ ವಿತರಣೆ: ವಿಜೇತೆ ಸಾಧ್ವಿ ಸೈಲ್ ಅವರಿಗೆ ₹1 ಲಕ್ಷ, ಮೊದಲ ಮತ್ತು ಎರಡನೇ ರನ್ನರ್ ಅಪ್ ಆದವರಿಗೆ ತಲಾ ₹50 ಸಾವಿರ ನಗದು ಬಹುಮಾನವನ್ನು ಅಚ್ಯುತ ಸಮಂತ ಅವರು ತಮ್ಮ ಸಂಸ್ಥೆಯ ಪರವಾಗಿ ವಿತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.