ನಾಗಪುರ: ಜಿಲ್ಲೆಯ ಕತೋಲ್ ತಾಲ್ಲೂಕಿನ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸ್ಫೋಟ ಸಂಭವಿಸಿದೆ. ಪರಿಣಾಮವಾಗಿ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ. ದೂರದಲ್ಲಿರುವ ಕೊತ್ವಾಲ್ಬುರ್ಡಿಯ ಏಷ್ಯನ್ ಪಟಾಕಿ ಕಾರ್ಖಾನೆಯಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಈ ವೇಳೆ 31 ಕಾರ್ಮಿಕರು ಇದ್ದರು ಎಂದು ಮಾಹಿತಿ ನೀಡಿದ್ದಾರೆ.

ಈ ಕುರಿತು ಸುದ್ದಿ ಸಂಸ್ಥೆ 'ಪಿಟಿಐ' ಟ್ವೀಟ್ ಮಾಡಿದೆ.

'ಅವಘಡದಲ್ಲಿ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಸ್ಫೋಟಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಸ್ಫೋಟದ ಕಾರಣದಿಂದಾಗಿ ಕಾರ್ಖಾನೆ ಸುತ್ತಲಿನ ಪ್ರದೇಶದಲ್ಲಿ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲಾಗಿದೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.