ಕೋಟ್ವಾರ್: ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಕಾರೊಂದು ಕಂದಕಕ್ಕೆ ಉರುಳಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೌಗಾಂವ್ ಬಳಿಯ ಸಿಸಾಲ್ಡಿ– ಅನ್ಸ್ಗೇಟ್ ರಸ್ತೆಯಲ್ಲಿ ಶುಕ್ರವಾರ ಸಂಜೆ ಈ ಘಟನೆ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

‘ಕಾರು ಬಸ್ರಾ ಹಳ್ಳಿಯಿಂದ ಗುನಿಯಾಲಗಾಂವ್ಗೆ ತೆರಳುತ್ತಿತ್ತು. ಮದುವೆ ಸ್ಥಳವನ್ನು ತಲುಪುವ ಧಾವಂತದಲ್ಲಿ ಚಾಲಕ ಮುಖ್ಯ ರಸ್ತೆಯನ್ನು ಬಿಟ್ಟು ಕಿರಿದಾದ ರಸ್ತೆ ಮಾರ್ಗದಲ್ಲಿ ತೆರಳಿದ್ದಾನೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಅವಘಡದಲ್ಲಿ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಕ್ಷಣವೇ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ (ಎಸ್ಡಿಆರ್ಎಫ್) ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಕಂದಕದಲ್ಲಿ ಸಿಲುಕಿದ್ದ ವ್ಯಕ್ತಿಗಳನ್ನು ರಕ್ಷಿಸಿದ್ದಾರೆ. ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ’ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.