ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೈಬರ್‌ನೆಟ್‌ ಹಗರಣ: ಚಂದ್ರಬಾಬು ನಾಯ್ಡು ಅರ್ಜಿ ವಿಚಾರಣೆ ಮುಂದೂಡಿಕೆ

Published 30 ನವೆಂಬರ್ 2023, 14:21 IST
Last Updated 30 ನವೆಂಬರ್ 2023, 14:21 IST
ಅಕ್ಷರ ಗಾತ್ರ

ನವದೆಹಲಿ: ಫೈಬರ್‌ನೆಟ್‌ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಡಿಸೆಂಬರ್‌ 12ರ ವರೆಗೆ ಮುಂದೂಡಿದೆ.

ಕೌಶಲಾಭಿವೃದ್ಧಿ ನಿಗಮ ಹಗರಣದಲ್ಲಿ ತಮ್ಮ ವಿರುದ್ಧ ದಾಖಲಿಸಲಾಗಿರುವ ಎಫ್‌ಐಆರ್‌ ಅನ್ನು ರದ್ದುಪಡಿಸುವಂತೆ ಕೋರಿ ನಾಯ್ಡು ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದ ಆದೇಶವು ಸದ್ಯದಲ್ಲೇ ಹೊರಬೀಳಲಿದೆ. ಹೀಗಾಗಿ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿರುವುದಾಗಿ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್‌ ಮತ್ತು ಬೇಲಾ ಎಂ. ತ್ರಿವೇದಿ ಅವರಿದ್ದ ನ್ಯಾಯಪೀಠವು ತಿಳಿಸಿದೆ.

ಆಂಧ್ರಪ್ರದೇಶ ಫೈಬರ್‌ನೆಟ್‌ ಯೋಜನೆಯ ಹಂತ–1ರ ಟೆಂಡರ್‌ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ. ಇದರಿಂದ ರಾಜ್ಯ ಬೊಕ್ಕಸಕ್ಕೆ ₹ 330 ಕೋಟಿ ನಷ್ಟವಾಗಿದೆ ಎಂದು ಆರೋಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT