ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಹೋರಾಟಗಾರರಿಗೆ ಸೇನಾ ಗೌರವ: ಬಿಪಿನ್‌ ರಾವತ್

Last Updated 1 ಮೇ 2020, 20:00 IST
ಅಕ್ಷರ ಗಾತ್ರ

ವದೆಹಲಿ: ‘ವೈಮಾನಿಕ ಪ್ರದರ್ಶನ,ಹಡಗುಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸುವ ಜೊತೆಗೆ ಆಸ್ಪತ್ರೆಗಳ ಮೇಲೆ ಪುಷ್ಪವೃಷ್ಟಿ ಮೂಲಕಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಸೇವಕರಿಗೆ ಸೇನೆ ಗೌರವ ಸಲ್ಲಿಸಲಿದೆ’ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್ ತಿಳಿಸಿದ್ದಾರೆ.

ಸೇನೆಯ ಮುಖ್ಯಸ್ಥ ಜನರಲ್‌ ಎಂ.ಎಂ.ನರವಣೆ,ನೌಕಾಪಡೆಯ ಮುಖ್ಯಸ್ಥ ಚೀಫ್‌ ಅಡ್ಮಿರಲ್‌ ಕರಂಬೀರ್‌ ಸಿಂಗ್, ‌ವಾಯುಪಡೆಯ ಮುಖ್ಯಸ್ಥ ಆರ್.ಕೆ.ಎಸ್. ಬದೌರಿಯಾ‌ ಶುಕ್ರವಾರ ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸಿದರು.

‘ಯುದ್ಧ ವಿಮಾನಗಳ ಮೂಲಕ ಮೇ 3 ರಂದು ಸಂಜೆ ಶ್ರೀನಗರದಿಂದ ತಿರುವನಂತಪುರದವರೆಗೆ, ದಿಬ್ರೂಗರ್‌ನಿಂದ ಕಛ್‌ವರೆಗೆ ವೈಮಾನಿಕ ಪ್ರದರ್ಶನದ ಮೂಲಕ ಗೌರವ ವಂದನೆ ಸಲ್ಲಿಸಲಾಗುವುದು. ನಮ್ಮನ್ನು ಸುರಕ್ಷಿತವಾಗಿಡಲು ಶ್ರಮಿಸುತ್ತಿರುವ ಎಲ್ಲರಿಗೂ ಕೃತಜ್ಞತೆ ವ್ಯಕ್ತಪಡಿಸುತ್ತಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT