ತಿರುವನಂತಪುರ: ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನಾ ಅವರಿಗೆ ಶುಕ್ರವಾರ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಸುದ್ದಿವಾಹಿನಿಯೊಂದರಲ್ಲಿ ಮಾತನಾಡಿದ್ದ ಆಯಿಷಾ ಸುಲ್ತಾನಾ, ಲಕ್ಷದ್ವೀಪದ ಆಡಳಿತಾಧಿಕಾರಿ ಪ್ರಫುಲ್ ಕೆ.ಪಟೇಲ್ ಅವರನ್ನು ‘ಜೈವಿಕ ಅಸ್ತ್ರ’ ಎಂದು ಕರೆದಿದ್ದರು. ಜತೆಗೆ, ‘ಕೇಂದ್ರ ಸರ್ಕಾರ ಪ್ರಫುಲ್ ಪಟೇಲ್ ಅವರನ್ನು ಲಕ್ಷದ್ವೀಪದ ಜನರ ವಿರುದ್ಧ ಜೈವಿಕ ಅಸ್ತ್ರದಂತೆ ಬಳಸುತ್ತಿದೆ’ ಎಂದು ಅವರು ಆರೋಪಿಸಿದ್ದರು.

‘ಆಯಿಷಾ ಸುಲ್ತಾನ ಅವರು ಸುಳ್ಳುಸುದ್ದಿ ಹರಡುವ ಮೂಲಕ ಕೇಂದ್ರ ಸರ್ಕಾರದ ಗೌರವಕ್ಕೆ ಅವರು ಧಕ್ಕೆ ತಂದಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಅಲ್ಲಿನ ಬಿಜೆಪಿ ಘಟಕದ ಅಧ್ಯಕ್ಷ ಅಬ್ದುಲ್ ಖಾದರ್ ಪೊಲೀಸರಿಗೆ ದೂರು ನೀಡಿದ್ದರು.

ಆಯಿಷಾ ಅವರ ಹೇಳಿಕೆ ವಿವಾದಕ್ಕೆ ಕಾರಣದ ಬೆನ್ನಲ್ಲೇ ಪೊಲೀಸರು ಆಯಿಷಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ... ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಆಯಿಷಾ ಸುಲ್ತಾನಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.