ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರ: ಮತದಾರರ ಅಂತಿಮಪಟ್ಟಿ ಪ್ರಕಟ– ವಿಧಾನಸಭೆ ಚುನಾವಣೆ ಸನಿಹ

ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಮತದಾರರ ಅಂತಿಮ ಪಟ್ಟಿ ಸೋಮವಾರ ಬಿಡುಗಡೆಯಾಗಿದೆ.
Published 23 ಜನವರಿ 2024, 6:53 IST
Last Updated 23 ಜನವರಿ 2024, 6:53 IST
ಅಕ್ಷರ ಗಾತ್ರ

ಜಮ್ಮು: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಮತದಾರರ ಅಂತಿಮ ಪಟ್ಟಿ ಸೋಮವಾರ ಬಿಡುಗಡೆಯಾಗಿದೆ.

2.31 ಲಕ್ಷ ಹೊಸ ಮತದಾರರೂ ಸೇರಿದಂತೆ ಜಮ್ಮು ಕಾಶ್ಮೀರದಲ್ಲಿ ಒಟ್ಟು 86.93 ಲಕ್ಷ ಮತದಾರರು ಪಟ್ಟಿಯಲ್ಲಿ ಹೆಸರು ಪಡೆದಿದ್ದಾರೆ.

ಇದರಲ್ಲಿ 44.34 ಲಕ್ಷ ಪುರುಷರು, 42.58 ಲಕ್ಷ ಮಹಿಳಾ ಮತದಾರರಿದ್ದಾರೆ ಎಂದು ಜಮ್ಮು ಕಾಶ್ಮೀರದ ಮುಖ್ಯ ಚುನಾವಣಾ ಅಧಿಕಾರಿ ಪಾಂಡುರಂಗ ಪೊಳೆ ತಿಳಿಸಿದ್ದಾರೆ.

ಒಟ್ಟಾರೆ 86,000 ಹೆಸರುಗಳನ್ನು ವಿವಿಧ ಕಾರಣಗಳಿಂದ ಪಟ್ಟಿಯಿಂದ ತೆಗೆದು ಹಾಕಲಾಗಿದೆ.

ಮತದಾರರ ಪಟ್ಟಿಯಲ್ಲಿ ಹೆಸರು ಪಡೆದವರ ಪ್ರಮಾಣ ಹೆಚ್ಚಳವಾಗಿದ್ದು, ಲಿಂಗಾನುಪಾತ 924ರಿಂದ 954ಕ್ಕೆ ಏರಿಕೆಯಾಗಿದೆ.

ಇದಲ್ಲದೇ ಜಮ್ಮು ಮತ್ತು ಕಾಶ್ಮೀರದಲ್ಲಿ 259 ಹೊಸ ಮತಗಟ್ಟೆಗಳನ್ನು ಗುರುತಿಸಲಾಗಿದೆ ಎಂದು ಪೊಳೆ ತಿಳಿಸಿದ್ದಾರೆ.

ಈ ಮೂಲಕ ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ ಸಮೀಪವಾಗುತ್ತಿದೆ. ಇದೇ ವರ್ಷ ಚುನಾವಣೆ ನಡೆಯಬಹುದು ಎಂದು ನಿರೀಕ್ಷಿಸಲಾಗಿದೆ.

2019 ರಲ್ಲಿ ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದಾದ ನಂತರ ಅದು ಕೇಂದ್ರಾಡಳಿತ ಪ್ರದೇಶವೆಂದು ಘೋಷಣೆಯಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ ವಿವಿಧ ಕಾರಣಗಳಿಂದ ಅಲ್ಲಿ ಚುನಾವಣೆ ನಡೆದಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT