ರಾಯಗಢ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಮಧ್ಯಂತರ ಬಜೆಟ್ ನರೇಂದ್ರ ಮೋದಿ ಸರ್ಕಾರದ ಕೊನೆಯ ಬಜೆಟ್ ಎಂದು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ವ್ಯಂಗ್ಯವಾಡಿದ್ದಾರೆ.
ಮೋದಿ ಸರ್ಕಾರವು ತನ್ನ ಕೊನೆಯ ಬಜೆಟ್ ಅನ್ನು ಇಂದು (ಗುರುವಾರ) ಮಂಡಿಸಿದೆ. ನಾನು ವಿತ್ತ ಸಚಿವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಏಕೆಂದರೆ ಅವರು ಅತ್ಯಂತ ಭಾರವಾದ ಹೃದಯದಿಂದ ಕೊನೆಯ ಬಜೆಟ್ ಅನ್ನು ಮಂಡಿಸಿದರು ಎಂದು ಠಾಕ್ರೆ ಟೀಕಿಸಿದ್ದಾರೆ.
ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಬಂಧನ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ಜಾರಿ ನಿರ್ದೇಶನಾಲಯವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.