ಆರೋಪಿ ಮತ್ತು ಅವರ ಸಹಚರರಿಗೆ ಸೇರಿದ ನಗರದ ಇತರ 14 ಸ್ಥಳಗಳಲ್ಲಿ ಕೇಂದ್ರ ತನಿಖಾ ಸಂಸ್ಥೆ ಶೋಧ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.
ಆಗಸ್ಟ್ 9ರಂದು ಆಸ್ಪತ್ರೆಯ ಸೆಮಿನಾರ್ ಸಭಾಂಗಣದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಸಂಜಯ್ ರಾಯ್ ಎಂಬಾತನನ್ನು ಬಂಧಿಸಲಾಗಿದೆ.
ಹತ್ಯೆ ಪ್ರಕರಣ ಮತ್ತು ಆಪಾದಿತ ಹಣಕಾಸಿನ ಅಕ್ರಮಗಳ ಕುರಿತು ಕಲ್ಕತ್ತ ಹೈಕೋರ್ಟ್ ನಿರ್ದೇಶನದ ಮೇರೆಗೆ ಸಿಬಿಐ ಪ್ರಕರಣಗಳನ್ನು ದಾಖಲಿಸಿದೆ.