ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪೂಜಾ ಖೇಡ್ಕರ್ ತಂದೆ ವಿರುದ್ಧ ಎಫ್‌ಐಆರ್

Published 9 ಆಗಸ್ಟ್ 2024, 14:26 IST
Last Updated 9 ಆಗಸ್ಟ್ 2024, 14:26 IST
ಅಕ್ಷರ ಗಾತ್ರ

ಪುಣೆ: ಇಲ್ಲಿನ ಸರ್ಕಾರಿ ಅಧಿಕಾರಿಗಳ ಮೇಲೆ ಬೆದರಿಕೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪೂಜಾ ಖೇಡ್ಕರ್ ತಂದೆ ದಿಲೀಪ್ ಖೇಡ್ಕರ್ ಅವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.

ತಹಶೀಲ್ದಾರರು ನೀಡಿದ ದೂರಿನ ಆಧಾರದ ಮೇಲೆ ಇಲ್ಲಿನ ಬಂಡ್‌ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

‘ಪೂಜಾ ಖೇಡ್ಕರ್ ಅವರು ಸಹಾಯಕ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ಸಂದರ್ಭದಲ್ಲಿ, ದಿಲೀಪ್ ಖೇಡ್ಕರ್ ಅವರು ತಹಶೀಲ್ದಾರ್ ದೀಪಕ್ ಅಕಾಡೆಗೆ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ ಮತ್ತು ಆಡಳಿತಾತ್ಮಕ ಕಾರ್ಯದಲ್ಲಿ ಹಸ್ತಕ್ಷೇಪ ಮಾಡುವ ಹಕ್ಕಿಲ್ಲದಿದ್ದರೂ ಸಹ ತಮ್ಮ ಮಗಳಿಗೆ ಕ್ಯಾಬಿನ್ ನೀಡುವಂತೆ ಕೇಳಿದರು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT