ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಫೆ ಬಾಂಬ್ ಸ್ಫೋಟ ಪ್ರಕರಣ ಕುರಿತ ಹೇಳಿಕೆ: ಶೋಭಾ ವಿರುದ್ಧದ ಎಫ್‌ಐಆರ್ ರದ್ದು

Published : 5 ಸೆಪ್ಟೆಂಬರ್ 2024, 15:32 IST
Last Updated : 5 ಸೆಪ್ಟೆಂಬರ್ 2024, 15:32 IST
ಫಾಲೋ ಮಾಡಿ
Comments

ಚೆನ್ನೈ: ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ್ದ ಹೇಳಿಕೆ ವಿಚಾರವಾಗಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಅವರು ತಮಿಳುನಾಡಿನ ಜನರ ಕ್ಷಮೆ ಯಾಚಿಸಿದ ನಂತರ, ಅವರ ವಿರುದ್ಧ ಮದುರೆ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಅನ್ನು ಮದ್ರಾಸ್ ಹೈಕೋರ್ಟ್ ಗುರುವಾರ ರದ್ದುಪಡಿಸಿದೆ.

ಸಚಿವೆ ಶೋಭಾ ಅವರು ತಾವು ಆಡಿದ್ದ ಮಾತುಗಳಿಗೆ ಕ್ಷಮೆ ಯಾಚಿಸಿರುವ ಕಾರಣಕ್ಕೆ ಪ್ರಕರಣವನ್ನು ಕೊನೆಗೊಳಿಸಬಹುದು ಎಂದು ಅಡ್ವೊಕೇಟ್ ಜನರಲ್ ಪಿ.ಎಸ್. ರಾಮನ್ ಅವರು ತಿಳಿಸಿದ ನಂತರ, ನ್ಯಾಯಮೂರ್ತಿ ಜಿ. ಜಯಚಂದ್ರನ್ ಅವರು ಎಫ್‌ಐಆರ್ ರದ್ದತಿಗೆ ಆದೇಶಿಸಿದರು.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ಶೋಭಾ ಅವರು ಈ ವರ್ಷದ ಮಾರ್ಚ್‌ನಲ್ಲಿ, ತಮಿಳುನಾಡಿನಿಂದ ಬರುವ ಜನರು ಬೆಂಗಳೂರಿನಲ್ಲಿ ಬಾಂಬ್ ಇರಿಸುತ್ತಾರೆ ಎಂದು ಹೇಳಿದ್ದರು. ಈ ಹೇಳಿಕೆಗಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ ಶೋಭಾ ಅವರು ನ್ಯಾಯಾಲಯಕ್ಕೆ ಕ್ಷಮೆ ಯಾಚನೆ ಪತ್ರವನ್ನು ಸಲ್ಲಿಸಿದರು. ‘ನಾನು ಆಡಿರುವ ಮಾತುಗಳು ತಮಿಳುನಾಡಿನ ಕೆಲವರ ಭಾವನೆಗಳಿಗೆ ಧಕ್ಕೆ ಉಂಟುಮಾಡಿವೆ ಎಂಬುದನ್ನು ಅರ್ಥ ಮಾಡಿಕೊಂಡು, ಹೇಳಿಕೆಯನ್ನು ಈಗಾಗಲೇ ಹಿಂಪಡೆದಿದ್ದೇನೆ, ಸಾಮಾಜಿಕ ಜಾಲತಾಣಗಳ ಮೂಲಕ ಕ್ಷಮೆ ಯಾಚಿಸಿದ್ದೇನೆ’ ಎಂದು ಶೋಭಾ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT