ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವಜನಿಕ ಚಿತಾಗಾರದಲ್ಲಿ ಬೆಕ್ಕಿನ ಅಂತ್ಯಸಂಸ್ಕಾರ: 6 ಮಂದಿ ವಿರುದ್ಧ ಎಫ್‌ಐಆರ್

Published 5 ಜನವರಿ 2024, 4:15 IST
Last Updated 5 ಜನವರಿ 2024, 4:15 IST
ಅಕ್ಷರ ಗಾತ್ರ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮೀರಾ ಭಾಯಂದರ್‌ನಲ್ಲಿ ಮಾನವರ ಮೃತದೇಹಗಳನ್ನು ಸುಡುವ ಸರ್ಕಾರಿ ಚಿತಾಗಾರದಲ್ಲಿ ಬೆಕ್ಕಿನ ಅಂತ್ಯಕ್ರಿಯೆ ನಡೆಸಿದ ಆರೋಪದ ಮೇಲೆ ಮಹಿಳೆ ಸೇರಿದಂತೆ ಆರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೀರಾ ಭಾಯಂದರ್ ಮುನ್ಸಿಪಲ್ ಕಾರ್ಪೊರೇಷನ್ (ಎಂಬಿಎಂಸಿ) ಅಧಿಕಾರಿಗಳ ದೂರಿನ ಮೇರೆಗೆ ಬುಧವಾರ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 297ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೂ ಪ್ರಕರಣದಲ್ಲಿ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಅವರು ಗುರುವಾರ ಹೇಳಿದ್ದಾರೆ.

‘ಡಿಸೆಂಬರ್ 22ರ ಸಂಜೆ ಘಟನೆ ನಡೆದಿದೆ. ಭಾಯಂದರ್ ಪಶ್ಚಿಮ ಭಾಗದಲ್ಲಿರುವ ಸಾರ್ವಜನಿಕ ಚಿತಾಗಾರದಲ್ಲಿ ಇಬ್ಬರು ವ್ಯಕ್ತಿಗಳು ತಮ್ಮ ಬೆಕ್ಕಿನ ಅಂತ್ಯಸಂಸ್ಕಾರ ನೆರವೇರಿಸಿದ್ದರು. ಈ ಸಂಬಂಧ ಆರು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಭಾಯಂದರ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ತಡವಾಗಿ ದೂರು ದಾಖಲಿಸಿದ ಕಾರಣವನ್ನು ಪೊಲೀಸರು ಬಹಿರಂಗಪಡಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT