ನವದೆಹಲಿ: ದೆಹಲಿಯ ಜಾಮಿಯಾ ನಗರದಲ್ಲಿ ಪೊಲೀಸರ ತಂಡದ ಮೇಲೆ ನಡೆದಿದ್ದ ದಾಳಿಯ ನೇತೃತ್ವವಹಿಸಿದ ಆರೋಪದ ಮೇಲೆ ದೆಹಲಿಯ ಓಖ್ಲಾದ ಎಎಪಿ ಶಾಸಕ ಅಮಾನತುಲ್ಲಾ ಖಾನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮಾನತುಲ್ಲಾ ಖಾನ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎಸ್ಎಸ್) ಸೆಕ್ಷನ್ 221/12 1(1), 132/ 191(2), 190/263(b), 351(3)/111 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಕುರಿತು ಭಾನುವಾರ ಮಾತನಾಡಿದ್ದ ಅಮಾನತುಲ್ಲಾ ಖಾನ್, ನಮ್ಮ ಪಕ್ಷದ (ಎಎಪಿ) ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಆರೋಪಿಸಿದ್ದರು.

70 ಸದಸ್ಯ ಬಲದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 48 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ, ಸರ್ಕಾರ ರಚಿಸಲು ಸಜ್ಜಾಗಿದೆ. ಇತ್ತ ಎಎಪಿ 22 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಪ್ರಮುಖ ಎಎಪಿ ನಾಯಕರು ಸೋಲು ಅನುಭವಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.