ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ₹ 65 ಲಕ್ಷ ವಂಚಿಸಿದ ಪೋಸ್ಟ್‌ಮಾಸ್ಟರ್‌ ವಿರುದ್ಧ FIR ದಾಖಲಿಸಿದ ಸಿಬಿಐ

Published 28 ಜೂನ್ 2023, 5:25 IST
Last Updated 28 ಜೂನ್ 2023, 5:25 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರದ ಹಣವನ್ನು ವಂಚಿಸಿದ ಆರೋಪದಡಿ ಮಧ್ಯಪ್ರದೇಶದ ಜಬಲ್‌ಪುರದ ಸಬ್‌ ಪೋಸ್ಟ್‌ಮಾಸ್ಟರ್‌ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದೆ.

ಮೋತಿನಾಳ ಪೋಸ್ಟ್ ಆಫೀಸ್‌ನಲ್ಲಿ ಸಬ್‌ ಪೋಸ್ಟ್‌ಮಾಸ್ಟರ್‌ ಆಗಿ ನೇಮಕಗೊಂಡಿದ್ದ ಬಲ್ವಾನ್ ಶಾ ಭಾಲವಿ, ಸರ್ಕಾರ ₹ 65 ಲಕ್ಷ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಜೂನ್ 26ರಂದು ಫೋರ್ಜರಿ ಪ್ರಕರಣ ಬಗ್ಗೆ ದೂರು ಸ್ವೀಕರಿಸಿದ್ದೇವೆ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂಚೆ ಕಚೇರಿಯಲ್ಲಿ ಆರೋಪಿಯು ನಕಲಿ ಸಹಿಗಳನ್ನು ಬಳಸಿ, 181 ಉಳಿತಾಯ ಬ್ಯಾಂಕ್‌ ಖಾತೆದಾರರಿಂದ ಹಣ ದುರುಪಯೋಗ ಪಡಿಸಿಕೊಂಡಿದ್ದಾನೆ. 2020 ಮತ್ತು 2022ರ ನಡುವೆ ಈ ವಂಚನೆಯ ಚಟುವಟಿಕೆ ನಡೆದಿದೆ ಎಂದು ಅಧಿಕಾರಿ ಹೇಳಿದ್ದಾರೆ.

ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ನಡಿ ಪ್ರಕರಣ ದಾಖಲಿಸಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT