ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೋದಿಯನ್ನು ತುಂಡು ತುಂಡಾಗಿ ಕತ್ತರಿಸುತ್ತೇನೆ ಎಂದ ತಮಿಳುನಾಡು ಸಚಿವನ ವಿರುದ್ಧ FIR

Published 14 ಮಾರ್ಚ್ 2024, 7:32 IST
Last Updated 14 ಮಾರ್ಚ್ 2024, 7:32 IST
ಅಕ್ಷರ ಗಾತ್ರ

ನವದೆಹಲಿ: ಸಾರ್ವಜನಿಕ ರ್‍ಯಾಲಿ ಸಂದರ್ಭ ಪ್ರಧಾನಿ ನರೇಂದ್ರಮೋದಿ ವಿರುದ್ಧ ಬೆದರಿಕೆಯ ಹೇಳಿಕೆ ನೀಡಿದ ಆರೋಪದಡಿ ತಮಿಳುನಾಡು ಸಚಿವ ಟಿ.ಎಂ. ಅಂಬರಸನ್ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಸುಪ್ರೀಂ ಕೋರ್ಟ್ ವಕೀಲ ಸತ್ಯ ರಂಜನ್ ಸ್ವೈನ್ ನೀಡಿದ ದೂರಿನ ಆಧಾರದ ಮೇಲೆ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತಮಿಳುನಾಡಿನ ಗ್ರಾಮೀಣ ಕೈಗಾರಿಕೆ, ಗುಡಿ ಕೈಗಾರಿಕೆ ಮತ್ತು ಸಣ್ಣ ಕೈಗಾರಿಕೆ ಖಾತೆ ಸಚಿವ ಅಂಬರಸನ್, ಪ್ರಧಾನಿ ಮೋದಿಯವರನ್ನು ತುಂಡು ತುಂಡಾಗಿ ಕತ್ತರಿಸುತ್ತೇನೆ ಎಂದು ಬಹಿರಂಗ ಹೇಳಿಕೆ ನೀಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

‘ಅಂಬರಸನ್ ಹೇಳಿಕೆಯು ಪ್ರಧಾನಮಂತ್ರಿಗಳ ಸುರಕ್ಷತೆಗೆ ಸಂಬಂಧಿಸಿದಂತೆ ಗಂಭೀರ ಕಳವಳದ ವಿಷಯವಾಗಿದೆ. ಉದ್ದೇಶಪೂರ್ವಕವಾಗಿ ಶಾಂತಿ ಮತ್ತು ಸುವ್ಯವಸ್ಥೆ ಕದಡುವ ಮೂಲಕ ಹಿಂಸಾಚಾರಕ್ಕೆ ಪ್ರಚೋದಿಸುವ ಯತ್ನ ನಡೆಸಲಾಗಿದೆ. ಇದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ’ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಐಪಿಸಿ ಸೆಕ್ಷನ್ 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು), 268 (ಸ್ಫೋಟಕ ವಸ್ತುವಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ನಡವಳಿಕೆ), 503 (ಅಪರಾಧ ಬೆದರಿಕೆ), 505 (ಸಾರ್ವಜನಿಕ ಕಿಡಿಗೇಡಿತನದ ಹೇಳಿಕೆಗಳು) ಮತ್ತು 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT