ನವದೆಹಲಿ: ದೆಹಲಿಯ ಏಮ್ಸ್ ಆಸ್ಪತ್ರೆಯ (AIIMS )ಎಂಡೋಸ್ಕೋಪಿ ಕೊಠಡಿಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ರೋಗಿಗಳನ್ನು ಸ್ಥಳಾಂತರಿಸಲಾಗಿದೆ.

8 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

ಸೋಮವಾರ ಬೆಳಿಗ್ಗೆ 11.54ರ ಹೊತ್ತಿಗೆ ತುರ್ತು ನಿಯಂತ್ರಣಾ ಕೊಠಡಿಗೆ ಕರೆ ಬಂದ ತಕ್ಷಣ ಎಲ್ಲಾ ರೋಗಿಗಳನ್ನು ಮತ್ತು ಸಿಬ್ಬಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಏಮ್ಸ್ (AIIMS)ನಿರ್ದೇಶಕರು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಹೊರರೋಗಿ ವಿಭಾಗ ‘ಹಳೆಯ ರಾಜಕುಮಾರಿ’ ಒಪಿಡಿ ಕಟ್ಟಡದ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ರಕ್ಷಣಾ ಕಾರ್ಯಾಚರಣೆ ಕೈಗೊಂಡ ಹಿನ್ನೆಲೆ ಯಾವುದೇ ಪ್ರಾಣಹಾನಿಯುಂಟಾಗಿಲ್ಲ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.