ಅಹಮದಾಬಾದ್: ಇಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ಬುಧವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದ್ದು ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಇಲ್ಲಿನ ವತ್ವಾ ಪ್ರದೇಶದಲ್ಲಿ ಈ ದುರಂತ ನಡೆದಿದೆ. ಸ್ಥಳಕ್ಕೆ ಆಗಮಿಸಿದ 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸಿವೆ ಎಂದು ಮೂಲಗಳು ತಿಳಿಸಿವೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾದ ಬಗ್ಗೆ ವರದಿಯಾಗಿಲ್ಲ. ಅವಘಡಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಎಂದು ಗುಜರಾತ್ ಪೊಲೀಸರು ಮಾಹಿತಿ ನೀಡಿದ್ದಾರೆ.

ಕಳೆದ ಭಾನುವಾರ ಇಲ್ಲಿನ ಬಗಾಪುರದಲ್ಲಿ ಬೆಂಕಿ ದುರಂತ ಸಂಭವಿಸಿ 20ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.