ಬೆಂಕಿ ಕಾಣಿಸಿಕೊಂಡ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದೆ. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.
‘ಹಳೆಯ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಸ್ಪತ್ರೆಯಲ್ಲಿನ ಎಲ್ಲಾ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಇಲ್ಲಿಯವರೆಗೆ ಯಾವುದೇ ಸಾವು- ನೋವುಗಳು ವರದಿಯಾಗಿಲ್ಲ’ ಎಂದು ತಮಿಳುನಾಡು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ ಜೆ ರಾಧಾಕೃಷ್ಣನ್ ತಿಳಿಸಿದ್ದಾರೆ.