ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊತ್ತಿ ಉರಿದ ತಾಜ್ ಎಕ್ಸ್‌ಪ್ರೆಸ್ ರೈಲಿನ 4 ಬೋಗಿಗಳು: ಪ್ರಯಾಣಿಕರು ಸುರಕ್ಷಿತ

Published 3 ಜೂನ್ 2024, 12:52 IST
Last Updated 3 ಜೂನ್ 2024, 12:52 IST
ಅಕ್ಷರ ಗಾತ್ರ

ನವದೆಹಲಿ: ಆಗ್ನೇಯ ದೆಹಲಿಯ ಸರಿತಾ ವಿಹಾರ್‌ನಲ್ಲಿ ಸೋಮವಾರ ತಾಜ್ ಎಕ್ಸ್‌ಪ್ರೆಸ್ ರೈಲಿನ ನಾಲ್ಕು ಬೋಗಿಗಳಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಎನ್‌ಡಿಟಿವಿ ವರದಿ ಮಾಡಿದೆ.‌

'ತಾಜ್ ಎಕ್ಸ್‌ಪ್ರೆಸ್ ರೈಲಿನ 4 ಬೋಗಿಗಲ್ಲಿ ಬೆಂಕಿ ಕಾಣಿಸಿಕೊಂಡಿರುವ ಕುರಿತು ಸಂಜೆ 4.24ಕ್ಕೆ ನಮಗೆ ಕರೆ ಬಂತು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ' ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (DFS) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತುಘಲಕಾಬಾದ್-ಓಖ್ಲಾ ನಡುವಿನ ತಾಜ್ ಎಕ್ಸ್‌ಪ್ರೆಸ್‌ನ 4 ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಉತ್ತರ ರೈಲ್ವೆ ಸಿಪಿಆರ್‌ಒ ತಿಳಿಸಿದ್ದಾರೆ.

ಒಟ್ಟು 6 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಈವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ರೈಲ್ವೆ ಡಿಸಿಪಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT