ಮುಂಬೈ: ಬಾಲಿವುಡ್ ನಟ ಶಾರುಕ್ ಖಾನ್ ಅವರ ನಿವಾಸ 'ಮನ್ನತ್'ಗೆ ಸಮೀಪದಲ್ಲಿರುವ ಬಹುಮಹಡಿ ಕಟ್ಟಡವೊಂದರಲ್ಲಿ ಸೋಮವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ.

ಬಾಂದ್ರಾ ಬ್ಯಾಂಡ್ಸ್ಟ್ಯಾಂಡ್ ಪ್ರದೇಶದಲ್ಲಿರುವ 21 ಅಂತಸ್ತಿನ 'ಜಿವೇಶ್' ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 8 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ.

ಕಟ್ಟಡದ 14ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮುಂಬೈ ಅಗ್ನಿ ಶಾಮಕ ದಳ ಮತ್ತು ಪೊಲೀಸರು ಖಚಿತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮುಂಬೈ ಉಪನಗರ ಅಭಿವೃದ್ಧಿ ಸಚಿವ ಆದಿತ್ಯ ಠಾಕ್ರೆ, 'ಪಶ್ಚಿಮ ಬಾಂದ್ರಾದಲ್ಲಿರುವ 21 ಅಂತಸ್ತಿನ ಕಟ್ಟಡದ 14ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ವರದಿಯಾಗಿದೆ. ಅಗ್ನಿ ಶಾಮಕ ದಳ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ. ಬಿಎಂಸಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ಯಾವುದೇ ಸಾವಿನ ವರದಿಯಾಗಿಲ್ಲ. ಕಟ್ಟಡದ ಆವರಣದಲ್ಲಿರುವ ನಿವಾಸಿಗಳ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.