ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ | ಅಗ್ನಿ ಅವಘಡ: 12 ಗುಡಿಸಲುಗಳು ಭಸ್ಮ

Published 25 ಮೇ 2024, 9:17 IST
Last Updated 25 ಮೇ 2024, 9:17 IST
ಅಕ್ಷರ ಗಾತ್ರ

ನವದೆಹಲಿ: ಆಗ್ನೇಯ ದೆಹಲಿಯ ಚಿಲ್ಲಾ ಖಾದರ್ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 12 ಗುಡಿಸಲುಗಳು ಸುಟ್ಟು ಭಸ್ಮಗೊಂಡಿವೆ ಎಂದು ದೆಹಲಿ ಅಗ್ನಿಶಾಮಕ ದಳದ (ಡಿಎಫ್‌ಎಸ್) ಅಧಿಕಾರಿಗಳು ತಿಳಿಸಿದ್ದಾರೆ.

'ಇಂದು(ಶನಿವಾರ) ಬೆಳಿಗ್ಗೆ 10.46‌ಕ್ಕೆ ಘಟನೆ ಬಗ್ಗೆ ಮಾಹಿತಿ ಬಂದಿದೆ. ತಕ್ಷಣ ಅಗ್ನಿಶಾಮಕ 7 ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಯಿತು. ಸುಮಾರು ಒಂದು ಗಂಟೆ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ಸಂಪೂರ್ಣ ಹತೋಟಿಗೆ ತರಲಾಯಿತು' ಎಂದು ಡಿಎಫ್‌ಎಸ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ ಎಂದೂ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT