ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌ | ಡಿವೈಡರ್‌ಗೆ ಡಿಕ್ಕಿ–ಫ್ಲೈಓವರ್‌ ಮೇಲೆ ಹೊತ್ತಿ ಉರಿದ ಇಂಧನ ಟ್ಯಾಂಕರ್‌

Published 3 ಜನವರಿ 2024, 10:15 IST
Last Updated 3 ಜನವರಿ 2024, 10:15 IST
ಅಕ್ಷರ ಗಾತ್ರ

ಲೂದಿಯಾನ: ಪಂಜಾಬ್‌ನ ಲೂದಿಯಾನದಲ್ಲಿ ಫ್ಲೈಓವರ್‌ ಮೇಲೆ ಇಂಧನ ಟ್ಯಾಂಕರ್‌ ಒಂದಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಬುಧವಾರ ನಡೆದಿದೆ.

ಲೂದಿಯಾನದ ಖನ್ನಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಬೆಂಕಿ ತಗುಲಿದೆ. ಇದರಿಂದ ಸುತ್ತಲಿನ ಪ್ರದೇಶದಲ್ಲಿ ಭಾರಿ ಪ್ರಮಾಣದ ಹೊಗೆ ಆವರಿಸಿದೆ. ತಕ್ಷಣವೇ ಫ್ಲೈ ಓವರ್‌ ಮೇಲೆ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. 

ಟ್ಯಾಂಕರ್‌ಗೆ ಬೆಂಕಿ ಹೊತ್ತಿಕೊಂಡ ವಿಡಿಯೊ, ಪೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಅದರ ವಿಡಿಯೊವನ್ನು ಸುದ್ದಿ ಸಂಸ್ಥೆ ಎಎನ್‌ಐ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

ತುರ್ತು ವಿಪತ್ತು ನಿಗ್ರಹ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ವರದಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT