ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದ್ದು ಈ ಘಟನೆಯಲ್ಲಿ 190ಕ್ಕೂ ಹೆಚ್ಚು ರೋಗಿಗಳನ್ನು ರಕ್ಷಣೆ ಮಾಡಲಾಗಿದೆ.

ಈ ಘಟನೆಯಲ್ಲಿ ಯಾವುದೇ ಸಾವು ನೋವು ಉಂಟಾಗಿಲ್ಲ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಕಮಲಾ ರಾಜಾ ಆಸ್ಪತ್ರೆಯ ಸ್ತ್ರೀರೋಗ ವಿಭಾಗದ ತೀವ್ರ ನಿಗಾ ಘಟಕ(ಐಸಿಯು)ದಲ್ಲಿ ಮುಂಜಾನೆ 2 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಆಸ್ಪತ್ರೆ ಸಿಬ್ಬಂದಿ ಐಸಿಯು ಘಟಕದ ಕಿಟಕಿಯ ಗಾಜುಗಳನ್ನು ಒಡೆದು 13 ರೋಗಿಗಳು ಹಾಗೂ ಇತರೆ ವಾರ್ಡ್ಗಳಲ್ಲಿದ್ದ 190ಕ್ಕೂ ಹೆಚ್ಚು ರೋಗಿಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ವರ್ಗಾಯಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಂತರ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು ಎಂದು ಅವರು ಮಾಹಿತಿ ನೀಡಿದರು.

ಶಾರ್ಟ್ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದು ತನಿಖೆಗೆ ಆದೇಶಿಸಿದ್ದಾರೆ.
.ಆಸ್ಪತ್ರೆಯಲ್ಲಿ ಬೆಂಕಿ ಅವಘಡ | 10 ಮಕ್ಕಳ ಸಾವು; ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ.ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿ ಅವಘಡ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.