ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುಂಬೈ: ಬಹುಮಹಡಿ ಕಟ್ಟಡದಲ್ಲಿ ಬೆಂಕಿ

Published 2 ಜೂನ್ 2024, 13:30 IST
Last Updated 2 ಜೂನ್ 2024, 13:30 IST
ಅಕ್ಷರ ಗಾತ್ರ

ಮುಂಬೈ: ದಕ್ಷಿಣ ಮುಂಬೈನ ಬೈಕುಲ್ಲಾ ಪ್ರದೇಶದ 62 ಅಂತಸ್ತಿನ ವಸತಿ ಸಮುಚ್ಚಯದಲ್ಲಿ ಶನಿವಾರ ಮಧ್ಯರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಸುಮಾರು 30 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಬೈಕುಲ್ಲಾದ ಖಟಾವೊ ಮಿಲ್‌ ಕಾಂಪೌಂಡ್‌ನಲ್ಲಿರುವ ಮಾಂಟೆ ಸೌತ್‌ ಕಟ್ಟಡದ ‘ಎ’ ವಿಂಗ್‌ನ 10ನೇ ಮಹಡಿಯ ಫ್ಲಾಟ್‌ನಲ್ಲಿ ಶನಿವಾರ ರಾತ್ರಿ 11.42 ಗಂಟೆಗೆ ಬೆಂಕಿ ಕಾಣಿಸಿಕೊಂಡಿತು. ಅದು ಕೆಲ ಹೊತ್ತಿನಲ್ಲಿಯೇ ಇಡೀ ಮಹಡಿಗೆ ಆವರಿಸಿತು. ಕೆಲ ವ್ಯಕ್ತಿಗಳು ಕಟ್ಟಡದ ಮೇಲಿನ ಮಹಡಿಯಲ್ಲಿ ಸಿಲುಕಿದ್ದರು. ಮೆಟ್ಟಿಲುಗಳ ಮೂಲಕ ಸುಮಾರು 30 ಜನರನ್ನು ರಕ್ಷಿಸಲಾಯಿತು ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಗಾಯಗೊಂಡ ವ್ಯಕ್ತಿಯನ್ನು ಪಾಂಡುರಂಗ ಶಿಂಧೆ (57) ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದರು. ಎಂಟು ನೀರಿನ ಟ್ಯಾಂಕರ್‌ಗಳು ಮತ್ತು ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಮತ್ತು ಜನರನ್ನು ರಕ್ಷಣಾ ಕಾರ್ಯ ನಿರ್ವಹಿಸಿದವು. ಬೆಳಗಿನ ಜಾವ 2.45ರ ಸುಮಾರಿಗೆ ಬೆಂಕಿ ನಂದಿಸುವ ಕಾರ್ಯ ಪೂರ್ಣವಾಯಿತು ಎಂದು ಅವರು ಹೇಳಿದ್ದಾರೆ. 10ನೇ ಮಹಡಿಯಲ್ಲಿನ ಫ್ಲಾಟ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT