ಭೋಪಾಲ್: ಇಲ್ಲಿನ ಕಮಲಾ ನೆಹರೂ ಆಸ್ಪತ್ರೆಯ ‘ನವಜಾತ ಶಿಶುಗಳ ವಿಶೇಷ ನಿಗಾ ಘಟಕ’ದಲ್ಲಿ (ಎಸ್‌ಎನ್‌ಸಿಯು) ಸೋಮವಾರ ರಾತ್ರಿ ಬೆಂಕಿ ಅವಘಡ ಸಂಭವಿಸಿ ಕನಿಷ್ಠ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ.

ಅಗ್ನಿಶಾಮಕ ದಳದವರು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆ ಬಗ್ಗೆ ಮಧ್ಯ ಪ್ರದೇಶ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.

ವಾರ್ಡ್ ಒಳಗಿನ ಪರಿಸ್ಥಿತಿ ಭಯಾನಕವಾಗಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಹೇಳಿದ್ದಾರೆ.

ಆಸ್ಪತ್ರೆಯ ತೀವ್ರ ನಿಗಾ ಘಟಕ ಇರುವ ಮೂರನೇ ಮಹಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಓದಿ:ಮಳೆಗೆ ನಲುಗಿದ ತಮಿಳುನಾಡು, ಪುದುಚೇರಿ: ಮಳೆ ಸಂಬಂಧಿ ಅವಘಡಗಳಲ್ಲಿ ನಾಲ್ವರ ಸಾವು

‘ಮಾಹಿತಿ ದೊರೆತ ತಕ್ಷಣವೇ ಇತರರ ಜತೆಗೂಡಿ ಸ್ಥಳಕ್ಕೆ ಧಾವಿಸಿದ್ದೇವೆ. ವಾರ್ಡ್ ಒಳಗಡೆ ತುಂಬಾ ಕತ್ತಲು ಇತ್ತು. ಮಕ್ಕಳನ್ನು ತಕ್ಷಣವೇ ಸಮೀಪದ ಇತರ ವಾರ್ಡ್‌ಗಳಿಗೆ ಸ್ಥಳಾಂತರಿಸಲಾಗಿತ್ತು’ ಎಂದೂ ಸಚಿವರು ತಿಳಿಸಿದ್ದಾರೆ.

ಘಟನೆ ಬಗ್ಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬದವರಿಗೆ ತಲಾ ₹4 ಲಕ್ಷ ಪರಿಹಾರ ಘೋಷಿಸಿದ್ದಾರೆ.

ರಾತ್ರಿ ಸುಮಾರು 9ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಅಗ್ನಿಶಾಮಕ ದಳದ 10 ವಾಹನಗಳು ಸ್ಥಳಕ್ಕೆ ಧಾವಿಸಿದ್ದವು ಎಂದು ಫತೇಗಡ ಅಗ್ನಿಶಾಮಕ ಠಾಣೆಯ ಉಸ್ತುವಾರಿ ಜುಬೇರ್ ಖಾನ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.