ಚಲ್ಲಪಲ್ಲಿ: ಕೃಷ್ಣಾ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪಟಾಕಿ ವಿಲೇವಾರಿ ಮಾಡುವಾಗ ಸ್ಫೋಟ ಸಂಭವಿಸಿದ್ದು, ಆರು ಪೊಲೀಸರು ಗಾಯಗೊಂಡಿದ್ದಾರೆ.

‘ಅನಧಿಕೃತ ಪಟಾಕಿ ಸಂಗ್ರಹ ಘಟಕಗಳ ಮೇಲೆ ದಾಳಿ ನಡೆಸಿದ್ದ ಪೊಲೀಸರು, ಅಪಾರ ಪ್ರಮಾಣದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದರು. ಅವುಗಳನ್ನು ಪೊಲೀಸ್ ಠಾಣೆಯಲ್ಲಿ ಸುರಕ್ಷಿತವಾಗಿ ಸಂಗ್ರಹಿಸಿ ಇಡಲಾಗಿತ್ತು. ನ್ಯಾಯಾಲಯದ ಆದೇಶದ ಅನುಸಾರ ಪಟಾಕಿಗಳನ್ನು ವಿಲೇವಾರಿ ಮಾಡಲು ಹೊರೆಗೆ ತೆಗೆದುಕೊಂಡು ಹೋಗುವಾಗ ಸ್ಫೋಟ ಸಂಭವಿಸಿದೆ’ ಎಂದು ಎಸ್ಪಿ ವಿದ್ಯಾ ಸಾಗರ್ ನಾಯ್ಡು ಅವರು ಹೇಳಿದರು.

‘ಘಟನೆಯಲ್ಲಿ ಮೂವರು ಅಧಿಕಾರಿಗಳಿಗೆ ಗಂಭೀರ ಗಾಯಗಳಾಗಿದ್ದು, ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಲಾಗುವುದು’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.