ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನ ಅರಿಯಾಲೂರು ಬಳಿ ಪಟಾಕಿ ಘಟಕದಲ್ಲಿ ಭೀಕರ ದುರಂತ: 9 ಜನ ಸಾವು

ಅತ್ತಿಬೆಲೆ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ಪಟಾಕಿ ದುರಂತ
Published 9 ಅಕ್ಟೋಬರ್ 2023, 10:49 IST
Last Updated 9 ಅಕ್ಟೋಬರ್ 2023, 10:49 IST
ಅಕ್ಷರ ಗಾತ್ರ

ಅರಿಯಾಲೂರು (ತಮಿಳುನಾಡು): ಅರಿಯಾಲೂರು ಜಿಲ್ಲೆಯ ಪಟಾಕಿ ಘಟಕವೊಂದರಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ ಒಂಬತ್ತು ಜನ ಮೃತಪಟ್ಟಿದ್ದಾರೆ.

ಅರಿಯಾಲೂರು ಜಿಲ್ಲೆಯ ವೀರಾಗಲೂರು ಗ್ರಾಮದಲ್ಲಿ ಈ ಭೀಕರ ಘಟನೆ ನಡೆದಿದ್ದು, ಬೆಂಕಿ ಹೊತ್ತಿಕೊಳ್ಳಲು ಕಾರಣವೇನು? ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರು ಸಂತಾಪ ಸೂಚಿಸಿ, ಮೃತರ ಕುಟುಂಬಗಳಿಗೆ ತಲಾ ₹ 3 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ ₹ 1 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳಾದವರಿಗೆ ₹ 50 ಸಾವಿರ ಪರಿಹಾರ ಘೋಷಿಸಿದ್ದಾರೆ.

‘ಅವಘಡದಲ್ಲಿ ಗಾಯಗೊಂಡವರನ್ನು ತಂಜಾವೂರಿನ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ಅವರಿಗೆ ವಿಶೇಷ ವೈದ್ಯಕೀಯ ಆರೈಕೆ ನೀಡಲಾಗುತ್ತಿದೆ. ರಕ್ಷಣಾ ಮತ್ತು ಪರಿಹಾರ ಚಟುವಟಿಕೆಗಳನ್ನು ತ್ವರಿತಗೊಳಿಸಲು ಸಚಿವರಾದ ಎಸ್. ಎಸ್. ಶಿವಶಂಕರ್ ಮತ್ತು ಸಿ.ವಿ. ಗಣೇಶನ್ ಅವರನ್ನು ನಿಯೋಜಿಸಲಾಗಿದೆ.’ ಎಂದು ಸ್ಟಾಲಿನ್‌ ಹೇಳಿದ್ದಾರೆ.

ಮೊನ್ನೆಯಷ್ಟೇ ಕರ್ನಾಟಕದ ಅತ್ತಿಬೆಲೆ ಬಳಿ ಸಂಭವಿಸಿದ ಭೀಕರ ಪಟಾಕಿ ದುರಂತದಲ್ಲಿ 14 ಜನ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT