ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ: ಇಬ್ಬರು ಆರೋಪಿಗಳ ಬಂಧನ

Published 16 ಏಪ್ರಿಲ್ 2024, 2:30 IST
Last Updated 16 ಏಪ್ರಿಲ್ 2024, 2:30 IST
ಅಕ್ಷರ ಗಾತ್ರ

ಮುಂಬೈ (ಮಹಾರಾಷ್ಟ್ರ): ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ನಿವಾಸದ ಹೊರಗೆ ಗುಂಡು ಹಾರಿಸಿದ ಪ್ರಕರಣ ಸಂಬಂಧ ಮುಂಬೈ ಕ್ರೈಂ ಬ್ರಾಂಚ್ ಇಬ್ಬರು ಆರೋಪಿಗಳನ್ನು ಬಂಧಿಸಿದೆ.

ವಿಕ್ಕಿ ಗುಪ್ತಾ ಹಾಗೂ ಸಾಗರ್ ಪಾಲ್ ಬಂಧಿತ ಆರೋಪಿಗಳು. 

ಗುಂಡು ಹಾರಿಸಿ ಪರಾರಿಯಾಗಿದ್ದ ಆರೋಪಿಗಳನ್ನು ಸೋಮವಾರ ರಾತ್ರಿ ಗುಜರಾತ್‌ನ ಭುಜ್‌ನಲ್ಲಿ ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ಖಚಿತಪಡಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ಅವರನ್ನು ಮುಂಬೈಗೆ ಕರೆತರಲಾಗುವುದು ಎಂದು ಅವರು ತಿಳಿಸಿದ್ದಾರೆ.

ಎರಡು ಬೈಕ್‌ಗಳಲ್ಲಿ ಬಂದ ಇಬ್ಬರು ಆರೋಪಿಗಳು ಏಪ್ರಿಲ್‌ 14ರ (ಭಾನುವಾರ) ಮುಂಜಾನೆ 5 ಗಂಟೆ ವೇಳೆಗೆ ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ ಎದುರು ನಾಲ್ಕು ಸುತ್ತು ಗುಂಡು ಹಾರಿಸಿ, ಸ್ಥಳದಿಂದ ಪರಾರಿಯಾಗಿದ್ದರು.

ಘಟನೆಯ ಬಳಿಕ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಘಟನೆಯ ಕುರಿತು ಸಲ್ಮಾನ್ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದರು. ಅಲ್ಲದೇ ಮುಂಬೈ ಪೊಲೀಸ್ ಕಮಿಷನರ್ ಜೊತೆ ಚರ್ಚಿಸಿ ಭದ್ರತೆ ಹೆಚ್ಚಿಸುವಂತೆ ಸೂಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT