ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಲ್ಮಾನ್‌ ಮನೆ ಬಳಿ ಗುಂಡಿನ ದಾಳಿ: ಇಬ್ಬರ ಬಂಧನ

Published 25 ಏಪ್ರಿಲ್ 2024, 15:48 IST
Last Updated 25 ಏಪ್ರಿಲ್ 2024, 15:48 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರ ಮುಂಬೈ ಮನೆಯ ಹೊರಗೆ ಇತ್ತೀಚೆಗೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಗುರುವಾರ ಪಂಜಾಬ್‌ನಲ್ಲಿ ಇನ್ನೂ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಸುಭಾಷ್‌ ಚಂದರ್‌ (37) ಮತ್ತು ಅನುಜ್‌ ಥಾಪನ್‌ (32) ಎಂಬುವರೇ ಬಂಧಿತರು. ಇವರು ಮಾ.15ರಂದು ಶೂಟರ್‌ಗಳಿಗೆ ಗನ್‌ ಮತ್ತಿತರ ಶಸ್ತ್ರಾಸ್ತ್ರಗಳನ್ನು ಒದಗಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಇಬ್ಬರನ್ನೂ ಅಪರಾಧ ದಳ ತಂಡವು ಬಂಧಿಸಿದೆ. ಈ ನಡುವೆ ಗುಂಡಿನ ದಾಳಿ ನಡೆಸಿದ ಆರೋಪದ ಮೇಲೆ ಬಂಧಿತರಾಗಿರುವ ಬಿಹಾರದ ನಿವಾಸಿಗಳಾದ ವಿಕ್ಕಿ ಗುಪ್ತಾ (24) ಮತ್ತು ಸಾಗರ್‌ ಪಾಲ್‌ (21) ನ್ಯಾಯಾಂಗ ಬಂಧನದ ಅವಧಿಯನ್ನು ಮುಂಬೈ ನ್ಯಾಯಾಲಯ ಏ.29ರವರೆಗೆ ವಿಸ್ತರಿಸಿದೆ. 

ವಿಕ್ಕಿ ಮತ್ತು ಸಾಗರ್‌ ಇಬ್ಬರೂ ಮಾ.14ರಂದು ಮುಂಬೈನ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿರುವ ನಟ ಸಲ್ಮಾನ್‌ ಮನೆ ಎದುರು ಗುಂಡು ಹಾರಿಸಿ, ಬೈಕ್‌ನಲ್ಲಿ ಪರಾರಿಯಾಗಿದ್ದರು. 

ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೊಯ್‌ ಹಾಗೂ ಆತನ ಸಹೋದರ ಅನ್ಮೋಲ್‌ ಬಿಷ್ಣೊಯ್‌ ಈ ಪ್ರಕರಣದ ಆರೋಪಿಗಳು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT