ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಹ್ಲಿ, ಧೋನಿ ಮಕ್ಕಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದವರ ವಿರುದ್ಧ ದಾಖಲಾಯಿತು FIR

Last Updated 16 ಜನವರಿ 2023, 9:19 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ಕ್ರಿಕೆಟ್ ಆಟಗಾರರ ಮಕ್ಕಳ ಬಗ್ಗೆ ಅಶ್ಲೀಲವಾಗಿ ಮಾತನಾಡಿ ಅತ್ಯಾಚಾರದ ಬೆದರಿಕೆ ಹಾಕಿದ್ದ ದುರುಳರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಕೆಲ ತಿಂಗಳುಗಳ ಹಿಂದೆ ಭಾರತ ತಂಡ ಕ್ರಿಕೆಟ್‌ನಲ್ಲಿ ಸೋಲುಂಡಾಗ ಸಾಮಾಜಿಕ ಮಾಧ್ಯಮಗಳಲ್ಲಿ ವಿರಾಟ್ ಕೊಹ್ಲಿ, ಎಂಎಸ್ ಧೋನಿ ಅವರ ಹೆಣ್ಣು ಮಕ್ಕಳ ಮೇಲೆ ಕೆಲವರು ಸಾಮಾಜಿಕ ತಾಣಗಳಲ್ಲಿ ಬೆದರಿಕೆ ಹಾಕಿದ್ದರು.

ಆದರೆ, ಈ ವಿಚಾರವಾಗಿ ಅಧಿಕೃತವಾಗಿ ಯಾರೂ ದೂರು ನೀಡಿರಲಿಲ್ಲ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಮಹಿಳಾ ಆಯೋಗ ದೂರು ದಾಖಲಿಸಿಕೊಂಡು ತನಿಖೆ ಮಾಡುವಂತೆ ತಾಕೀತು ಮಾಡಿತ್ತು.

ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್, ‘ನನ್ನ ನೋಟಿಸ್‌ ನಂತರ ದೆಹಲಿ ಪೊಲೀಸರು ಕ್ರಿಕೆಟರ್‌ಗಳ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಬೆದರಿಕೆ ಹಾಕಿದ್ದವರ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ಧರಿಸಿದ್ದಾರೆ. ಆದಷ್ಟು ಬೇಗ ದುರುಳರನ್ನು ಕಂಬಿ ಹಿಂದೆ ಕಳಿಸಲಾಗುವುದು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT