ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭಾರತೀಯ ನ್ಯಾಯ ಸಂಹಿತೆ | ದೆಹಲಿಯಲ್ಲಿ ಹೊಸ ಕಾನೂನಿನಡಿ ದಾಖಲಾಯ್ತು ಮೊದಲ ಪ್ರಕರಣ

Published 1 ಜುಲೈ 2024, 5:42 IST
Last Updated 1 ಜುಲೈ 2024, 5:42 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರುವ ಹೊಸ ಮೂರು ಕ್ರಿಮಿನಲ್‌ ಅಪರಾಧ ಕಾನೂನುಗಳು ಇಂದಿನಿಂದ ಜಾರಿಗೆ ಬಂದಿವೆ.

ಭಾರತೀಯ ನ್ಯಾಯ ಸಂಹಿತೆ 2023ರ ಅಡಿಯಲ್ಲಿ ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಮೊದಲ ಎಫ್‌ಐಆರ್ ದಾಖಲಾಗಿದೆ.

ದೆಹಲಿಯ ರೈಲು ನಿಲ್ದಾಣದ ಸ್ಕೈ ವಾಕ್ ಬಳಿ ತಂಬಾಕು ಮಾರಾಟ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 285ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಯನ್ನು ಬಿಹಾರದ ಬರ್ಹ್ ನಿವಾಸಿ ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ. ಅವರು ರೈಲು ನಿಲ್ದಾಣದ ಮುಖ್ಯರಸ್ತೆಯ ಬಳಿ ಎತ್ತಿನಗಾಡಿಯಲ್ಲಿ ತಂಬಾಕು ಮಾರಾಟ ಮಾಡುತ್ತಿದ್ದರು. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದ್ದು, ಅಂಗಡಿಯನ್ನು ತೆರವುಗೊಳಿಸುವಂತೆ ಹಲವು ಬಾರಿ ಸೂಚನೆ ನೀಡಿದರೂ ನಿರ್ಲಕ್ಷ್ಯ ತೋರಿದ್ದರು ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ 2023 ಹೊಸದಾಗಿ ಅನುಷ್ಠಾನಗೊಂಡಿರುವ ಕಾಯ್ದೆಗಳಾಗಿವೆ.

163 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ದಂಡ ಸಂಹಿತೆ, 126 ವರ್ಷಗಳ ಹಿಂದಿನ ಅಪರಾಧ ದಂಡಪ್ರಕ್ರಿಯಾ ಸಂಹಿತೆ ಮತ್ತು 151 ವರ್ಷಗಳ ಹಿಂದೆ ರೂಪುಗೊಂಡ ಭಾರತೀಯ ಸಾಕ್ಷ್ಯ ಕಾಯ್ದೆಯ ಬದಲಿಗೆ ಈ ಮೂರು ಕಾನೂನುಗಳು ಜಾರಿಗೆ ಬರಲಿವೆ.

ಸಮಾಜದ ವಾಸ್ತವಾಂಶ ಮತ್ತು ಅಪರಾಧಗಳನ್ನು ಪರಿಣಾಮಕಾರಿಯಾಗಿ ಎದುರಿಸುವ ಕಾರ್ಯವಿಧಾನವನ್ನು ಹೊಸ ಕಾನೂನುಗಳ ಮೂಲಕ ಒದಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT