ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ₹100 ಮುಖಬೆಲೆಯ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ.

ದೆಹಲಿಯ ಡಾ. ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಿದ್ದರು. ಇದೇ ವೇಳೆ ಮಾತನಾಡಿದ ಅವರು, ‘ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮಾತೆಯ ಚಿತ್ರವನ್ನು ನಾಣ್ಯದ ಮೇಲೆ ಮುದ್ರಿಸಲಾಗಿದೆ. ಇದು ಬಹಳ ಹೆಮ್ಮೆ ಮತ್ತು ಐತಿಹಾಸಿಕ ಮಹತ್ವವನ್ನು ಸೂಚಿಸುತ್ತದೆ’ ಎಂದು ಹೇಳಿದ್ದಾರೆ.

₹100 ನಾಣ್ಯದ ಒಂದು ಬದಿಯಲ್ಲಿ ರಾಷ್ಟ್ರೀಯ ಲಾಂಛನವನ್ನು ಮತ್ತು ಇನ್ನೊಂದು ಬದಿಯಲ್ಲಿ ‘ವರದ ಮುದ್ರೆ’ಯಲ್ಲಿ ಸಿಂಹದ ಮೇಲೆ ಕುಳಿತಿರುವ ಭಾರತ ಮಾತೆಯ ಚಿತ್ರವಿದೆ ಮತ್ತು ಸ್ವಯಂಸೇವಕರು ಆಕೆಯ ಮುಂದೆ ಸಮರ್ಪಣಾ ಭಾವದಿಂದ ನಮಸ್ಕರಿಸುವ ಚಿತ್ರ ಮುದ್ರಿಸಲಾಗಿದೆ. ಅದರೊಂದಿಗೆ ಹಿಂದಿ ಹಾಗೂ ಇಂಗ್ಲೀಷ್ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ 100 ವರ್ಷ ಎಂದು ಬರೆಯಲಾಗಿದೆ.

ನಾಣ್ಯದ ಮೇಲೆ ಆರ್ಎಸ್ಎಸ್ ಧ್ಯೇಯ ವಾಕ್ಯವನ್ನು ಸಹ ಮುದ್ರಿಸಲಾಗಿದ್ದು, ‘ಎಲ್ಲವೂ ರಾಷ್ಟ್ರಕ್ಕೆ ಸಮರ್ಪಿತವಾಗಿದೆ. ಎಲ್ಲವೂ ರಾಷ್ಟ್ರದ್ದು, ಯಾವುದೂ ನನ್ನದಲ್ಲ..’ ಎಂಬುದು ಇದರ ಅರ್ಥ.

1963ರ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಆರ್ಎಸ್ಎಸ್ ಸ್ವಯಂಸೇವಕರು ಭಾಗವಹಿಸಿದ್ದನ್ನು ಅಂಚೆ ಚೀಟಿಯಲ್ಲಿ ಚಿತ್ರಿಸಲಾಗಿದೆ. ಇದು ಸಂಘದ ಐತಿಹಾಸಿಕ ಕೊಡುಗೆಗಳನ್ನು ಒತ್ತಿಹೇಳುತ್ತದೆ. ಜತೆಗೆ, ಭಾರತ ಮಾತೆಗೆ, ಆರ್ಎಸ್ಎಸ್ನ ಶತಮಾನಗಳಷ್ಟು ಹಳೆಯ ಸೇವೆ ಮತ್ತು ಸಮರ್ಪಣಾ ಪ್ರಯಾಣಕ್ಕೆ ಹೆಮ್ಮೆಯ ಗೌರವ ಎಂದು ಮೋದಿ ಹೇಳಿದ್ದಾರೆ.

ಸಮಾರಂಭದಲ್ಲಿ ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಭಾಗವಹಿಸಿದ್ದರು.
.ಸವಾಲುಗಳ ನಡುವೆಯೂ ಆರ್ಎಸ್ಎಸ್ ಬಲಿಷ್ಠವಾಗಿದೆ: ಪ್ರಧಾನಿ ಮೋದಿ ಶ್ಲಾಘನೆ.ಆಳ–ಅಗಲ | RSS History: ಆರ್ಎಸ್ಎಸ್ @100.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.