ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ: ನಾಳೆಯಿಂದ ನೂತನ ಸರ್ಕಾರದ ವಿಧಾನಸಭೆ ಅಧಿವೇಶನ

Published 17 ಡಿಸೆಂಬರ್ 2023, 13:37 IST
Last Updated 17 ಡಿಸೆಂಬರ್ 2023, 13:37 IST
ಅಕ್ಷರ ಗಾತ್ರ

ಭೋಪಾಲ್‌: ಹೊಸದಾಗಿ ರಚನೆಯಾದ ಮಧ್ಯಪ್ರದೇಶ ಸರ್ಕಾರದ ಮೊದಲ ವಿಧಾನಸಭೆ ಅಧಿವೇಶನ ನಾಳೆ (ಸೋಮವಾರ) ಆರಂಭವಾಗಲಿದೆ.

16ನೇ ವಿಧಾನಸಭೆ ಅಧಿವೇಶನ ನಾಲ್ಕು ದಿನಗಳ ಕಾಲ ನಡೆಯಲಿದೆ. ಮೊದಲನೇ ದಿನ ಹೊಸದಾಗಿ ಆಯ್ಕೆಯಾದ ಸದಸ್ಯರು ಮತ್ತು ಇತರ ಸದಸ್ಯರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಡಿ.21ಕ್ಕೆ ಅಧಿವೇಶನ ಮುಕ್ತಾಯಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಮೊದಲ ಎರಡು ದಿನದ ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೂರನೇ ದಿನ ಸದನವು ಸ್ಪೀಕರ್‌ ಆಯ್ಕೆ ಮಾಡಲಿದೆ.

ಸಂಸತ್ತಿನ ಭದ್ರತಾ ಲೋಪದ ಹಿನ್ನೆಲೆಯಲ್ಲಿ ಇಲ್ಲಿನ ವಿಧಾನಸಭಾ ಭವನದಲ್ಲಿ ಬಿಗಿ ಭದ್ರತೆ ಕೈಗೊಳ್ಳುವಂತೆ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಎಪಿ ಸಿಂಗ್ ಅವರು ಪೊಲೀಸರಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT