ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಸೋರ್ ಅಪಘಾತ ಮಾರ್ಗದಲ್ಲಿ ಚಲಿಸಿದ ಗೂಡ್ಸ್‌ ರೈಲು

Published 4 ಜೂನ್ 2023, 21:09 IST
Last Updated 4 ಜೂನ್ 2023, 21:09 IST
ಅಕ್ಷರ ಗಾತ್ರ

ನವದೆಹಲಿ: ಬೆಂಗಳೂರು –ಹೌರಾ ಎಕ್ಸ್‌ಪ್ರೆಸ್‌ ರೈಲು ಅಪಘಾತಕ್ಕೀಡಾದ ಮಾರ್ಗದಲ್ಲಿಯೇ ಭಾನುವಾರ ರಾತ್ರಿ 10.40ಗಂಟೆಗೆ ವಿಶಾಖಪಟ್ಟಣದ ಬಂದರಿನಿಂದ ಕಲ್ಲಿದ್ದಲು ತುಂಬಿದ್ದ ಗೂಡ್ಸ್‌ ರೈಲು ರೂರ್ಕೆಲಾ ಸ್ಟೀಲ್‌ ಪ್ಲಾಟ್‌ನತ್ತ ಸಂಚರಿಸಿತು.

ತ್ರಿವಳಿ ರೈಲು ಅಪಘಾತ ಸಂಭವಿಸಿದ 51 ಗಂಟೆಗಳ ಬಳಿಕ ಈ ಮಾರ್ಗದಲ್ಲಿ ಸಂಚರಿಸಿದ ಮೊದಲ ರೈಲು ಇದಾಗಿದೆ. ನಿಧಾನವಾಗಿ ಸಂಚರಿಸಿದ ರೈಲನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌, ಪತ್ರಕರ್ತರು ಹಾಗೂ ರೈಲ್ವೆ ಅಧಿಕಾರಿಗಳು ವೀಕ್ಷಿಸಿದರು.  

‘ರೈಲ್ವೆ ಮಾರ್ಗದ ದುರಸ್ತಿ ಕಾರ್ಯ ಪೂರ್ಣಗೊಂಡ ಬಳಿಕ ಮೊದಲ ಸಂಚಾರ ಆರಂಭಗೊಂಡಿದೆ’ ಎಂದು ರೈಲ್ವೆ ಸಚಿವರು ಟ್ವೀಟ್‌ ಮಾಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT