ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18ನೇ ಲೋಕಸಭೆ: 15ರಿಂದ ಅಧಿವೇಶನ ಸಾಧ್ಯತೆ

Published 8 ಜೂನ್ 2024, 0:09 IST
Last Updated 8 ಜೂನ್ 2024, 0:09 IST
ಅಕ್ಷರ ಗಾತ್ರ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್‌ 15ರಿಂದ ಆರಂಭಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ಲೋಕಸಭಾ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವವರು ಪ್ರಮಾಣವಚನ ಸ್ವೀಕರಿಸುವುದರೊಂದಿಗೆ ಅಧಿವೇಶನ ಆರಂಭವಾಗಲಿದೆ. ಈ ಕಾರ್ಯಕ್ರಮ ಎರಡು ದಿನಗಳ ಕಾಲ ನಡೆಯಲಿದ್ದು ಬಳಿಕ ನೂತನ ಸ್ಪೀಕರ್‌ ಆಯ್ಕೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. 

ಅಧಿವೇಶನ ನಡೆಯುವ ದಿನಗಳ ಕುರಿತು ನೂತನ ಸಚಿವ ಸಂಪುಟದ ಸಭೆಯಲ್ಲಿ ಅಂತಿಮ ನಿರ್ಣಯ ಕೈಗೊಳ್ಳಲಾಗುತ್ತದೆ. ಭಾನುವಾರ ಸಂಜೆ, ನರೇಂದ್ರ ಮೋದಿ ಅವರು ನೂತನ ಪ್ರಧಾನಿಯಾಗಿ ಪ್ರತಿಜ್ಞಾನಿಧಿ ಸ್ವೀಕರಿಸಿದ ನಂತರ ಸಚಿವ ಸಂಪುಟ ಸಭೆ ನಡೆಯಲಿದೆ.  

ಅಧಿವೇಶನವು ಜೂನ್‌ 22ರಂದು ಮುಕ್ತಾಯಗೊಳ್ಳುವ ಸಾಧ್ಯತೆ ಇದೆ ಎಂದೂ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT