ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸಚಿವ ಅಜಯ್‌ ಮಿಶ್ರಾಗೆ ಬೆದರಿಕೆ ಕರೆ; ಹಣಕ್ಕೆ ಬೇಡಿಕೆ ಇಟ್ಟ ಐವರ ಬಂಧನ

Last Updated 24 ಡಿಸೆಂಬರ್ 2021, 11:16 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರದ ಗೃಹ ವ್ಯವಹಾರಗಳ ಖಾತೆ ರಾಜ್ಯ ಸಚಿವ ಅಜಯ್‌ ಕುಮಾರ್‌ ಮಿಶ್ರಾ ಅವರಿಗೆ ಫೋನ್‌ ಕರೆಗಳ ಮೂಲಕ ಬೆದರಿಸಿ ಸುಲಿಗೆಗೆ ಯತ್ನಿಸಿದ್ದು, ದೆಹಲಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸುಲಿಗೆ ಯತ್ನದ ಫೋನ್‌ ಕರೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಐವರು ಆರೋಪಿಗಳನ್ನು ಬಂಧಿಸಿರುವುದಾಗಿ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಆರೋಪಿಗಳನ್ನು ನಾಲ್ಕು ದಿನಗಳ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರ್ಟ್‌ಗೆ ಕೋರಿದ್ದಾರೆ. ಹಣಕ್ಕೆ ಬೇಡಿಕೆ ಇಟ್ಟು ಸಚಿವರ ಕಚೇರಿಗೆ ಫೋನ್‌ ಕರೆಗಳು ಬಂದಿದ್ದು, ಆ ಬಗ್ಗೆ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದರು. ನವದೆಹಲಿಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದ್ದು, ನೋಯ್ಡಾದಿಂದ ನಾಲ್ವರು ಮತ್ತು ದೆಹಲಿಯಿಂದ ಒಬ್ಬರ ಆರೋಪಿಯನ್ನು ಬಂಧಿಸಲಾಗಿದೆ.

ಅಕ್ಟೋಬರ್‌ 3ರಂದು ಲಖಿಂಪುರ್‌ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು, ಒಬ್ಬ ಪತ್ರಕರ್ತ ಸೇರಿದಂತೆ ಒಟ್ಟು ಎಂಟು ಮಂದಿ ಮೃತಪಟ್ಟಿದ್ದರು. ಆ ಪ್ರಕರಣದಲ್ಲಿ ಸಚಿವ ಅಜಯ್‌ ಕುಮಾರ್‌ ಮಿಶ್ರಾ ಅವರ ಮಗನನ್ನು ಬಂಧಿಸಲಾಗಿದ್ದು, ಅಜಯ್‌ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸುವಂತೆ ವಿಪಕ್ಷಗಳು ಒತ್ತಾಯಿಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT