ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದ ಐವರಲ್ಲಿ ‘ವೆಸ್ಟ್ ನೈಲ್ ಜ್ವರ’ ಪತ್ತೆ

Published 7 ಮೇ 2024, 7:41 IST
Last Updated 7 ಮೇ 2024, 7:41 IST
ಅಕ್ಷರ ಗಾತ್ರ

ಕೋಯಿಕ್ಕೋಡ್(ಕೇರಳ): ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ವೆಸ್ಟ್ ನೈಲ್ ಫೀವರ್‌ನ ಐದು ಪ್ರಕರಣಗಳು ಪತ್ತೆಯಾಗಿವೆ.

ಅವರ ಆರೋಗ್ಯ ಸ್ಥಿತಿ ಸಹಜವಾಗಿದ್ದು, ಮನೆಗಳಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿಗಳು ವಾಸವಿರುವ ಮನೆಗಳ ಸುತ್ತ ಬೇರೆ ಯಾರಲ್ಲೂ ಜ್ವರ ಕಂಡುಬಂದಿಲ್ಲ ಎಂದು ಜಿಲ್ಲಾ ಕಣ್ಗಾವಲು ತಂಡದ ಅಧಿಕಾರಿ ಹೇಳಿದ್ದಾರೆ. ಒಬ್ಬ ವ್ಯಕ್ತಿಯಲ್ಲಿ ಮಾತ್ರ ಸೋಂಕು ಕಂಡುಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರೋಗದ ಲಕ್ಷಣ ಕಂಡುಬಂದಿದ್ದವರ ಪ್ರಯೋಗಾಲಯ ಮಾದರಿಯನ್ನು ಪುಣೆಯ ರಾಷ್ಟ್ರೀಯ ವೈರಾಣು ಕೇಂದ್ರಕ್ಕೆ ಕಳುಹಿಸಲಾಗಿತ್ತು. ಈಗ ಅದರ ವರದಿ ಬಂದಿದ್ದು, ಐವರು ವೆಸ್ಟ್ ನೈಲ್ ಫೀವರ್‌ನಿಂದ ಬಳಲುತ್ತಿರುವುದು ಗೊತ್ತಾಗಿದೆ. ಈ ಜ್ವರ ಸೊಳ್ಳೆಗಳಿಂದ ಹರಡುತ್ತದೆ ಎಂದು ಅವರು ಹೇಳಿದ್ದಾರೆ.

1937ರಲ್ಲಿ ಮೊದಲ ಬಾರಿಗೆ ಉಗಾಂಡಾದಲ್ಲಿ ಈ ಜ್ವರ ಪತ್ತೆಯಾಗಿತ್ತು. 2011ರಲ್ಲಿ ಕೇರಳದಲ್ಲಿ ಮೊದಲ ಬಾರಿಗೆ ಪತ್ತೆಯಾಗಿತ್ತು. 2019ರಲ್ಲಿ ಮಲ್ಲಪ್ಪುರಂನಲ್ಲಿ ಒಬ್ಬ ಬಾಲಕ ಜ್ವರದಿಂದ ಮೃತಪಟ್ಟಿದ್ದ. ಮೇ 2022ರಲ್ಲಿ ತ್ರಿಶೂರ್‌ನಲ್ಲಿ 47 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT