ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು: ಲಾರಿ ಡಿಕ್ಕಿ ಹೊಡೆದು ಯಾತ್ರೆಗೆ ತೆರಳುತ್ತಿದ್ದ ಐವರು ಸಾವು

Published 30 ಡಿಸೆಂಬರ್ 2023, 14:36 IST
Last Updated 30 ಡಿಸೆಂಬರ್ 2023, 14:36 IST
ಅಕ್ಷರ ಗಾತ್ರ

ಪುದುಕೊಟ್ಟಾಯ್‌ (ತಮಿಳುನಾಡು): ಸಿಮೆಂಟ್‌ ಹೊತ್ತೊಯ್ಯುತ್ತಿದ್ದ ಲಾರಿಯೊಂದು ಎರಡು ವಾಹನಗಳಿಗೆ ಡಿಕ್ಕಿ ಹೊಡೆದು, ರಸ್ತೆ ಬದಿಯ ಟೀ ಅಂಗಡಿಗೆ ನುಗ್ಗಿದ ಪರಿಣಾಮ ಐವರು ಮೃತಪಟ್ಟು, 19 ಮಂದಿ ಗಾಯಗೊಂಡ ಘಟನೆ ಇಲ್ಲಿನ ನಮನಸಮುದ್ರಂನಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಯಾತ್ರೆಗೆ ತೆರಳುತ್ತಿದ್ದ ಭಕ್ತರು ಟೀ ಅಂಗಡಿಯೆದುರು ನಸುಕಿನ ಅವಧಿಯಲ್ಲಿ ತಮ್ಮ ವಾಹನ ನಿಲ್ಲಿಸಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ, ಕಾರು ಮತ್ತು ವ್ಯಾನ್‌ಗೆ ಡಿಕ್ಕಿ ಹೊಡೆದು ಟೀ ಅಂಗಡಿಯೊಳಗೆ ನುಗ್ಗಿದೆ ಎಂದು ತಿಳಿಸಿದ್ದಾರೆ.

‘ಕಾರಿನಲ್ಲಿ ತೆರಳುತ್ತಿದ್ದ ಭಕ್ತರು ಓಂ ಶಕ್ತಿ ದೇಗುಲಕ್ಕೆ ಮತ್ತು ವ್ಯಾನಿನಲ್ಲಿದ್ದ ಭಕ್ತರು ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ತೆಳುತ್ತಿದ್ದರು. ದುರ್ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾದರೆ, ಇನ್ನೊಬ್ಬರು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟರು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT