ಮುಂಬೈ: ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ಕಾರಿಗೆ ಪಿಕಪ್ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಿಂಡಖೇಡ ತಾಲೂಕಿನ ದಾಸ್ವೆಲ್ ಫಟಾದಲ್ಲಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅಪಘಾತದ ಸಮಯದಲ್ಲಿ ವ್ಯಾನ್ ಚಾಲಕ ಪಾನಮತ್ತನಾಗಿದ್ದ ಎನ್ನಲಾಗಿದೆ. ಆತನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.