ಕೋಯಿಕ್ಕೋಡ್: ‘ಕೇರಳದ ಕೋಯಿಕ್ಕೋಡ್–ಪಾಲಕ್ಕಾಡ್ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಬೊಲೆರೊ ಕಾರು–ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಇದರಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

‘ರಾಮನಟ್ಟುಕರದ ಪುಲಿಂಜೋಡ್ ಬಳಿ ಬೆಳಿಗ್ಗೆ ಸುಮಾರು 4.45ಕ್ಕೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಣಿಸುತ್ತಿದ್ದ ಎಲ್ಲಾ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಮೃತರನ್ನು ಪಾಲಕ್ಕಾಡ್ ಮೂಲದ ನಜೀರ್, ಸುಬೇರ್, ಮೊಹಮ್ಮದ್ ಜಹೀರ್, ಅಸೈನಾರ್, ತಹೀರ್ ಎಂದು ಗುರುತಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಸಂತ್ರಸ್ತರು ಕರಿಪುರದ ಬಳಿಯಿರುವ ಕ್ಯಾಲಿಕಟ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಿಂತಿರುಗುತ್ತಿದ್ದರು. ಮೃತ ದೇಹಗಳನ್ನು ಕೋಯಿಕ್ಕೋಡ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ’ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.