ಐಜ್ವಾಲ್: ಪಿಕಪ್ ಟ್ರಕ್, ಕಣಿವೆಗೆ ಉರುಳಿದ ಪರಿಣಾಮ ಮೂವರು ಮಹಿಳೆಯರು ಸೇರಿ ಐವರು ಮೃತಪಟ್ಟಿರುವ ಘಟನೆ ಪೂರ್ವ ಮಿಜೋರಾಂನ ಖಜವಾಲ್ ಜಿಲ್ಲೆಯಲ್ಲಿ ನಡೆದಿದೆ. 11 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗ್ಗೆ 9.30ರ ಸುಮಾರಿಗೆ ಅಂತ್ಯಸಂಸ್ಕಾರಕ್ಕೆಂದು ಟ್ರಕ್ನಲ್ಲಿ ರಬಂಗ್ ಹಳ್ಳಿ ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲಾಲ್ಚುಂಗ್ಲುರಾ ಹೇಳಿದ್ದಾರೆ.
19 ಜನರನ್ನು ಹೊತ್ತು ಸಾಗುತ್ತಿದ್ದ ವಾಹನದ ಬ್ರೇಕ್ ಫೇಲ್ ಆಗಿದ್ದು, ಅಪಘಾತಕ್ಕೆ ಕಾರಣವಿರಬಹುದು ಎಂದು ಅವರು ಹೇಳಿದ್ದಾರೆ.
ಅಪಘಾತದ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ರಬಂಗ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಸುನೀಗಿದ್ದಾರೆ.