ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಮ್ಮು: ಐವರು ಲಷ್ಕರ್-ಎ-ತಯಬಾ ಸಹಚರರ ಬಂಧನ

Published 12 ಜುಲೈ 2023, 9:55 IST
Last Updated 12 ಜುಲೈ 2023, 9:55 IST
ಅಕ್ಷರ ಗಾತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಂ ಜಿಲ್ಲೆಯಲ್ಲಿ ಲಷ್ಕರ್-ಎ-ತಯಬಾ (ಎಲ್‌ಇಟಿ) ಉಗ್ರ ಸಂಘಟನೆಯ ಐವರು ಸಹಚರರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಬುಡ್ಗಾಂ ಜಿಲ್ಲೆಯ ಖಾಗ್ ಪ್ರದೇಶದಲ್ಲಿ ಉಗ್ರರ ಸಹಚರರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಬಂಧಿತರನ್ನು ರೌಫ್ ಅಹ್ಮದ್ ವಾನಿ, ಹಿಲಾಲ್ ಅಹ್ಮದ್ ಮಲಿಕ್, ತೌಫೀಕ್ ಅಹ್ಮದ್ ದಾರ್, ಧಾನಿಶ್ ಅಹ್ಮದ್ ದಾರ್ ಮತ್ತು ಶೌಕತ್ ಅಲಿ ದಾರ್ ಎಂದು ಗುರುತಿಸಲಾಗಿದೆ.

ಇವರೆಲ್ಲರು ಎಲ್‌ಇಟಿ ಉಗ್ರ ಸಂಘಟನೆಯ ಜೊತೆ ನಂಟು ಹೊಂದಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಬಂಧಿತರಿಂದ ಅಕ್ರಮ ಸಮಾಗ್ರಿ ವಶಪಡಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT