ಭುವನೇಶ್ವರ: ಒಡಿಶಾದ ಜಾರ್ಸುಗುಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 49ರಲ್ಲಿ ಭಾನುವಾರ ಮುಂಜಾನೆ ಎಸ್ಯುವಿ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕನಿಷ್ಠ ಐವರು ಪೊಲೀಸ್ ಸಿಬ್ಬಂದಿ ಸಾವಿಗೀಡಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾರ್ಸುಗುಡ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಎಂಟು ಮಂದಿ ಪೊಲೀಸ್ ಸಿಬ್ಬಂದಿ ಎಸ್ಯುವಿನಲ್ಲಿ ಜಾರ್ಸುಗುಡದ ಮದುವೆಗೆ ಹೋಗಿ ಹಿಂತಿರುಗುತ್ತಿದ್ದಾಗ ಒಡಿಶಾ ಆದರ್ಶ ವಿದ್ಯಾಲಯ ಬಳಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಅಪಘಾತದಲ್ಲಿ ಜಾರ್ಸುಗುಡ ಜಿಲ್ಲೆಯ ಐವರು ಪೊಲೀಸ್ ಸಿಬ್ಬಂದಿ ಸಾವಿಗೀಡಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡು ಬರ್ಗಢದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಆರೋಗ್ಯ ಸ್ಥಿರವಾಗಿದೆ’ಎಂದು ಜಾರ್ಸುಗುಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಧುಸಿಕ್ತ ಮಿಶ್ರಾ ತಿಳಿಸಿದ್ದಾರೆ.

ಅಪಘಾತದಲ್ಲಿ ಟ್ರಕ್ ಚಾಲಕ ಕೂಡ ಗಾಯಗೊಂಡಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಡಿಕ್ಕಿಯ ನಂತರ ಟ್ರಕ್ ಪಕ್ಕಕ್ಕೆ ಉರುಳಿದ್ದು, ಪೊಲೀಸ್ ವಾಹನವು ಅಪಘಾತದಲ್ಲಿ ಸಂಪೂರ್ಣವಾಗಿ ಹಾನಿಗೊಳಗಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.