ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣಾ ನದಿಯಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳ ಸಾವು

Last Updated 16 ಡಿಸೆಂಬರ್ 2022, 16:27 IST
ಅಕ್ಷರ ಗಾತ್ರ

ಕೃಷ್ಣಾ: ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಕೃಷ್ಣಾ ನದಿಯಲ್ಲಿ ಮುಳುಗಿ ಐವರು ವಿದ್ಯಾರ್ಥಿಗಳು ಶುಕ್ರವಾರ ಮೃತಪಟ್ಟಿದ್ದಾರೆ. ಮೃತರೆಲ್ಲರೂ 13 ರಿಂದ 15 ವರ್ಷ ಒಳಗಿನವರಾಗಿದ್ದಾರೆ.

ಈವರೆಗೆ ಎರಡು ಮೃತದೇಹಗಳು ಪತ್ತೆಯಾಗಿದ್ದು, ಉಳಿದವರ ದೇಹಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಂಡಲ ಕಂದಾಯ ಅಧಿಕಾರಿ ಸತೀಶ್ ಕುಮಾರ್ ತಿಳಿಸಿದ್ದಾರೆ.

ಯನಮಲಕುದೂರು ಬಳಿ ಸ್ನಾನಕ್ಕೆಂದು ಏಳು ವಿದ್ಯಾರ್ಥಿಗಳು ನದಿಗೆ ತೆರಳಿದ್ದರು. ಈ ವೇಳೆ ಐವರು ನೀರಿನಲ್ಲಿ ಮುಳುಗಿದ್ದಾರೆ. ಇಬ್ಬರು ಬಾಲಕರು ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯ ಈಜುಗಾರರು ಮತ್ತು ಮೀನುಗಾರರು ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲು, ಕಾಮೇಶ್, ಮುನ್ನಾ, ಶೇಕ್ ಬಾಜಿ ಮತ್ತು ಹುಸೇನ್ ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.

ಇವರೆಲ್ಲರೂ ವಿಜಯವಾಡದ ಪಟಮಾತಲಂಕಾ ಮೂಲದವರಾಗಿದ್ದು, ಸ್ಥಳೀಯ ಸರ್ಕಾರಿ ಶಾಲೆಯಲ್ಲಿ 8 ಮತ್ತು 9 ನೇ ತರಗತಿಯಲ್ಲಿ ಓದುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT