ಚೆನ್ನೈ: ತಮಿಳುನಾಡಿನ ತಿರುತ್ತಣಿ ಬಳಿಯ ಚೆನ್ನೈ-ತಿರುಪತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿಗಳು ಖಾಸಗಿ ವಿಶ್ವವಿದ್ಯಾಲಯಕ್ಕೆ ಸೇರಿದವರಾಗಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.