ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸ್‌ಗಢ: ಬೀದಿ ನಾಯಿ ದಾಳಿಗೆ ಬಾಲಕಿ ಬಲಿ

Last Updated 8 ಏಪ್ರಿಲ್ 2023, 14:23 IST
ಅಕ್ಷರ ಗಾತ್ರ

ಛತ್ತೀಸ್‌ಗಢ: ಐದೂವರೆ ವರ್ಷದ ಬಾಲಕಿಯನ್ನು ಬೀದಿ ನಾಯಿಗಳು ಕಚ್ಚಿ ಕೊಂದಿರುವ ಘಟನೆ ಇಲ್ಲಿನ ಕೊರಿಯಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬೈಕುಂಠಪುರ ನಗರಕ್ಕೆ ಸಮೀಪವಿರುವ ತಲ್ವಾಪರ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ. ಬಾಲಕಿ ಸುಕಾಂತಿ ಮಜ್ಹಿ, ತಿನಿಸುಗಳನ್ನು ತರಲೆಂದು ಅಂಗಡಿಗೆ ತೆರಳಿದ್ದ ವೇಳೆ ಬೀದಿ ನಾಯಿಗಳು ಏಕಾಏಕಿ ದಾಳಿ ನಡೆಸಿವೆ. ಗಂಭೀರವಾಗಿ ಗಾಯಗೊಂಡಿದ್ದ ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿಸಿದ್ದಾರೆ.

ಬಾಲಕಿಯ ತಂದೆ ಇಟ್ಟಿಗೆ ಕುಲುಮೆಯಲ್ಲಿ ಕೆಲಸ ಮಾಡುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT