ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನಲ್ಲಿ ಗುರುವಾರ ಮದ್ಯಾಹ್ನ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ 2 ಗಂಟೆ ಮೊದಲು ಪ್ರಯಾಣಿಸಿದ್ದೆ. ಅಲ್ಲಿನ ಅವ್ಯವಸ್ಥೆಯ ದೃಶ್ಯಗಳನ್ನು ಸೆರೆಹಿಡಿದು ಏರ್ ಇಂಡಿಯಾಗೆ ಕಳುಹಿಸಬೇಕೆಂದಿದ್ದೆ. ಅಷ್ಟರಲ್ಲೇ ಈ ದುರ್ಘಟನೆ ನಡೆದಿದೆ ಎಂದು ಪ್ರಯಾಣಿಕರೊಬ್ಬರು ಆಘಾತ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಆಕಾಶ್ ವತ್ಸಾ ಎಂಬ ಹ್ಯಾಂಡಲ್ನಿಂದ ಕೆಲವೊಂದು ಚಿತ್ರಗಳ ಸಹಿತ ತಮ್ಮ ಅನುಭವ ಹಂಚಿಕೊಂಡಿರುವ ಪ್ರಯಾಣಕರೊಬ್ಬರು, ಅದರ ದುಸ್ಥಿತಿ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘AI-171 ವಿಮಾನ ಮೂಲಕ ದೆಹಲಿಯಿಂದ ಅಹಮದಾಬಾದ್ಗೆ ಗುರುವಾರ ಬೆಳಿಗ್ಗೆ ಪ್ರಯಾಣಿಸಿದ್ದೆ. ಕೆಲವೊಂದು ಅವ್ಯವಸ್ಥೆಯನ್ನು ಹಂಚಿಕೊಂಡಿದ್ದೇನೆ. ಇಲ್ಲಿ ಎಲ್ಲವೂ ಸರಿ ಇಲ್ಲ ಎಂದೆನಿಸುತ್ತಿತ್ತು. ಹವಾನಿಯಂತ್ರಿತ ಸಾಧನ, ಮನರಂಜನಾ ಪರದೆ ನಿರ್ವಹಿಸುವ ರಿಮೋಟ್ ಕೆಲಸ ಮಾಡುತ್ತಿರಲಿಲ್ಲ. ಹೀಗೆ ಹಲವು ಅವ್ಯವಸ್ಥೆಗಳನ್ನು ದೃಶ್ಯ ಸಹಿತ ಪಟ್ಟಿ ಮಾಡಿದ್ದೆ’ ಎಂದು ಅವರು ಹೇಳಿದ್ದಾರೆ.

‘ಇವೆಲ್ಲವನ್ನೂ ಏರ್ ಇಂಡಿಯಾಗೆ ಟ್ವಿಟ್ ಮಾಡಬೇಕೆಂದುಕೊಂಡಿದ್ದೆ. ಅವುಗಳೊಂದಿಗೆ ಹೆಚ್ಚಿನ ಮಾಹಿತಿ ನೀಡಲು ಬಯಸಿದ್ದೆ. ಈಗಲೂ ನಾನು ಮಾಹಿತಿ ನೀಡಲು ಸಿದ್ಧ. ನನ್ನ ಎಕ್ಸ್ ಖಾತೆಯನ್ನು ಸಂಪರ್ಕಿಸಿ’ ಎಂದು ಪ್ರಯಾಣಿಕ ಬರೆದುಕೊಂಡಿದ್ದಾರೆ.

ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ದುರಂತ ವಿಮಾನದಲ್ಲಿ ಸುಮಾರು 242 ಪ್ರಯಾಣಿಕರು ಇದ್ದರು ಎಂದೆನ್ನಲಾಗಿದೆ. ಏರ್ ಇಂಡಿಯಾಗೆ ಸೇರಿದ AI171 ವಿಮಾನವು ಗುರುವಾರ ಮಧ್ಯಾಹ್ನ 1.38ಕ್ಕೆ ಅಹಮದಾಬಾದ್ ವಿಮಾನನಿಲ್ದಾಣದಿಂದ ಟೇಕ್ಆಫ್ ಆಗಿತ್ತು.
.Ahmedabad Plane Crash: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವು.AirIndia Flight crash Highlights: 825 ಅಡಿ ಎತ್ತರದಿಂದ ಪತನಗೊಂಡ ವಿಮಾನ!.Ahmedabad Plane Crash: ಮಂಗಳೂರು ದುರಂತ ಸೇರಿದಂತೆ ಪ್ರಮುಖ ವಿಮಾನ ಅಪಘಾತಗಳು.Plane Crash: ಪತನಕ್ಕೂ ಮುನ್ನ ಅಪಾಯದ ಸೂಚನೆ ಅರಿತು ಎಟಿಸಿಗೆ ಕರೆ ಮಾಡಿದ್ದ ಪೈಲಟ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.