ಪಟ್ನಾ ಜಿಲ್ಲೆಯ ದಿಘಾ ಘಾಟ್, ಗಾಂಧಿ ಘಾಟ್, ಹತಿದಾ ಮತ್ತು ಮನೇರ್ ಪ್ರದೇಶಗಳಲ್ಲಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪರಿಣಾಮ ಪಟ್ನಾ ಮತ್ತು ಹಾಜಿಪುರದ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಂಗಾ ನದಿ ಮಾತ್ರವಲ್ಲದೆ, ರಾಜ್ಯದ ಎಲ್ಲ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದೆ. ಪ್ರವಾಹದಿಂದಾಗಿ ಸಾರನ್‌ನಲ್ಲಿ ನಾಲ್ವರು ಹಾಗೂ ಭೋಜ್‌ಪುರದಲ್ಲಿ ಓರ್ವ ಸೇರಿ ಐದು ಮಂದಿ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.
‘ನೀರಿನ ಮಟ್ಟ ಮತ್ತಷ್ಟು ಹೆಚ್ಚಾದರೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳವಂತೆ ಮತ್ತು ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗುವಂತೆ ಜಿಲ್ಲಾಡಳಿತ ಮತ್ತು ಸಂಬಂಧಿಸಿದ ಇತರ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ’ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.