ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Assam Flood | ಅಸ್ಸಾಂ ಪ್ರವಾಹ: ಐದು ಲಕ್ಷ ಜನರಿಗೆ ಸಂಕಷ್ಟ

Published 23 ಜೂನ್ 2023, 5:46 IST
Last Updated 23 ಜೂನ್ 2023, 5:46 IST
ಅಕ್ಷರ ಗಾತ್ರ

ಗುವಾಹಟಿ: ಅಸ್ಸಾಂನಲ್ಲಿ ಪ್ರವಾಹದ ಪರಿಸ್ಥಿತಿ ಭೀಕರವಾಗಿದ್ದು, ಐದು ಲಕ್ಷ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಬ್ರಹ್ಮಪುತ್ರ ಸೇರಿದಂತೆ ರಾಜ್ಯದ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ತೀವ್ರತೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದ ಆತಂಕ ಹೆಚ್ಚಿದೆ.

ಅಸ್ಸಾಂನಲ್ಲಿ ಸುರಿದ ಮಳೆಯಿಂದಾಗಿ ಸಂಭವಿಸಿದ ಅವಘಡದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‌ಡಿಎಂಎ) ತಿಳಿಸಿದೆ.

ರಾಜ್ಯದಲ್ಲಿ ಶುಕ್ರವಾರ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಸೋನಿತ್‌ಪುರ ಸೇರಿದಂತೆ ಹಲವು ಕಡೆ ಭೂಕುಸಿತ ಉಂಟಾಗಿದೆ. ರಸ್ತೆ ಮಾರ್ಗ ಕಡಿದಿದ್ದು, ವಿದ್ಯುತ್ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗಿದೆ.

ಪ್ರವಾಹದಿಂದಾಗಿ 16 ಜಿಲ್ಲೆಗಳಲ್ಲಿ ತೊಂದರೆ ಎದುರಾಗಿದೆ. 83 ತಾತ್ಕಾಲಿಕ ಶಿಬಿರಗಳಲ್ಲಿ 14,000 ಮಂದಿ ಆಶ್ರಯ ಪಡೆದುಕೊಂಡಿದ್ದಾರೆ.

ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಸೇರಿದಂತೆ ಸ್ಥಳೀಯರು ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT