ನವದೆಹಲಿ: ಪಹಲ್ಗಾಮ್ ದಾಳಿಯ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ನೀಡಿದ್ದರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ, ಜನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿ ಅವರು ಅಧಿಕಾರಿಗಳ ಮುಂದೆ ಹಾಜರಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂಬುದನ್ನು ಪರಿಗಣಿಸಿ, ನ್ಯಾಯಮೂರ್ತಿಗಳಾದ ಜೆ.ಕೆ. ಮಾಹೇಶ್ವರಿ ಮತ್ತು ಎ.ಎಸ್. ಚಂದೂರ್ಕರ್ ಅವರಿದ್ದ ಪೀಠವು, ನೇಹಾ ಅವರಿಗೆ ಜಾಮೀನು ಮಂಜೂರು ಮಾಡಿತು. ಪ್ರಕರಣದ ತನಿಖೆಯಲ್ಲಿ ಸಹರಿಸಬೇಕು ಎಂದು ನ್ಯಾಯಪೀಠ ಷರತ್ತು ವಿಧಿಸಿದೆ.

ಪಹಲ್ಗಾಮ್ ದಾಳಿಗೆ ಸಂಬಂಧಿಸಿ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿಯನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದರು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ನೇಹಾ ಸಲ್ಲಿಸಿದ್ದ ಅರ್ಜಿಯನ್ನುಅಲಹಾಬಾದ್ ಹೈಕೋರ್ಟ್ ಕಳೆದ ವರ್ಷ ತಿರಸ್ಕರಿಸಿತ್ತು. ಈ ತೀರ್ಪಿನ ವಿರುದ್ಧ ಅವರು ಮೇಲ್ಮನವಿ ಸಲ್ಲಿಸಿದ್ದರು.

ಪ್ರಕರಣದ ದೂರುದಾರರಿಗೆ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಅವರ ವಿರುದ್ದ ಬಲವಂತದ ಕ್ರಮವನ್ನು ತೆಗೆದುಕೊಳ್ಳಬಾರದು ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.